ಹಾವೇರಿ

ರಾಣಿಬೆನ್ನೂರು: ನಾಳೆ ಬಿಜೆಪಿ ಪೂರ್ವಭಾವಿ ಸಭೆ

Published On :

ರಾಣಿಬೆನ್ನೂರು: ನಗರದ ಸ್ಟೇಶನ್ ರಸ್ತೆಯ ಬಿಜೆಪಿ ಕಾರ್ಯಾಲಯದಲ್ಲಿ ಫೆ. 10ರಂದು ಮಧ್ಯಾಹ್ನ 3.30 ಗಂಟೆಗೆ ತಾಲೂಕಿನ ಬಿಜೆಪಿ ಅಧ್ಯಕ್ಷರಾದ ಬಸವರಾಜ ಲಕ್ಷ್ಮೇಶ್ವರ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿದೆ.
ಸಭೆಗೆ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಸಿ.ಎಂ. ಉದಾಸಿ, ಬಸವರಾಜ ಬೊಮ್ಮಾಯಿ, ರಾಜ್ಯ ಉಪಾಧ್ಯಕ್ಷ ಮಾ. ನಾಗರಾಜ, ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಣ್ಣ ಬೇವಿನಮರದ, ಸಂಸದ ಶಿವಕುಮಾರ ಉದಾಸಿ, ಜಿಲ್ಲಾ ಅಧ್ಯಕ್ಷ ಬೋಜರಾಜ ಕರೂದಿ, ರಾಜ್ಯ ಎಸ್ಟಿ ಮೋರ್ಚಾ ಪ್ರದಾನ ಕಾರ್ಯದರ್ಶಿ ಮಂಜುನಾಥ ಓಲೇಕಾರ, ರಾಜ್ಯ ಕಾರ್ಯದರ್ಶಿ ಭಾರತಿ ಜಂಬಗಿ, ಶಾಸಕರಾದ ಯು.ಬಿ. ಬಣಕಾರ, ಮಾಜಿ ಶಾಸಕ ಜಿ. ಶಿವಣ್ಣ, ಶಿವರಾಜ ಸಜ್ಜನ, ನೇಹರು ಓಲೇಕಾರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಕೇಲಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧರಾಜ ಕಲಕೋಟಿ, ಸಂಕಪ್ಪ ಮಾರನಾಳ, ಗಂಗಾಧರ ಮಲೆಬೆನ್ನೂರು, ಮೈಲಪ್ಪ ಗುಡಗೂರು, ವಿಶ್ವನಾಥ ಪಾಟೀಲ, ಚೂಳಪ್ಪ ಕಸವಾಳ, ಎಸ್.ಎಸ್. ರಾಮಲಿಂಗಣ್ಣನವರ ಆಗಮಿಸುವರು.
ಕಾರಣ ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ, ನಗರಸಭೆ ಮತ್ತು ಸ್ಥಳೀಯ ಸಂಘ ಸಂಸ್ಧೆಗಳ ಚುನಾಯಿತ ಪ್ರತಿನಿಧಿಗಳು ಆಗಮಿಸಬೇಕೆಂದು ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಪ್ರವಿಣ ಕೂಪರ್ಡೆ, ಉಮೇಶಣ್ಣ ಹೊನ್ನಾಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.