ಹಾವೇರಿ

ಸಂತರ ಚಿಂತನೆ ತಿಳಿಸುವ ಕಾರ್ಯಕ್ರಮ: ಕಾರಜೋಳ

Published On :

ಶಿಗ್ಗಾಂವಿ: ತರಳಬಾಳು ಉತ್ಸವ ಕೇವಲ ಸಾಂಸ್ಕೃತಿಕ ಉತ್ಸವವಲ್ಲ. ಸಂತರು, ಶರಣರ ಸಂದೇಶ ತಿಳಿಸುವ, ಪಾಲಿಸುವಂತೆ ಮಾಡುವ ಕಾರ್ಯಕ್ರಮವಾಗಿದೆ ಎಂದು ಮಾಜಿ ಸಚಿವ, ಶಾಸಕ ಗೋವಿಂದ ಕಾರಜೋಳ ಹೇಳಿದರು.
ಇಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾನುವಾರ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ದಿನಮಾನದಲ್ಲಿಯೂ ಅಸ್ಪೃಶ್ಯತೆ, ದೇವದಾಸಿ ಪದ್ಧತಿ ಹಾಗೆಯೇ ಇದೆ. ಶರಣರು, ಸಂತರ ಸಂದೇಶ ಎಷ್ಟು ಪಾಲಿಸುತ್ತಿದ್ದೇವೆ ಎಂಬುವುದನ್ನು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಶರಣರ ತತ್ವ ಸಂದೇಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಮೈಸೂರು ಪ್ರಾಧ್ಯಾಪಕ ಡಾ. ಬಿ.ವಿ. ವಸಂತಕುಮಾರ ಅವರು ಇಂದಿನ  ತಲ್ಲಣಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ, ಇಂದು ಭಾರತದಲ್ಲಿ ಬಡವ, ಶ್ರೀಮಂತ, ಪ್ರಜೆ ಪ್ರಜಾಪ್ರತಿನಿಧಿ ನಡುವೆ ಸಂಘರ್ಷ ನಡೆಯುತ್ತಿದೆ. ಇದಕ್ಕೆಲ್ಲ ದುರ್ಬಲ ಆಡಳಿತ, ದುರ್ಬಲ ಮನಸ್ಸು, ದುರ್ಬಲ ನಾಯಕತ್ವವೇ ಕಾರಣ.  ಮತದಾರ ಪ್ರಾಮಾಣಿಕತೆ ಹೊಂದಿ ಮತದಾರ ಪ್ರಭು ಆಗಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.