ಗ್ರಾಪಂ ವಿದ್ಯುತ್ ಬಾಕಿಸರ್ಕಾರವೇ ಪಾವತಿಸಲಿ
ಹಾವೇರಿ: ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ ಬಾಕಿಯನ್ನು ಸರ್ಕಾರ ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಮುಂದಿನ ವಿದ್ಯುತ್ ಬಿಲ್ನ್ನು ಸರ್ಕಾರವೇ ಭರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಆಗ್ರಹಿಸಿದರು.
ಅವರು ನಗರದ ಪ್ರವಾಸಿ ಗೃಹದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಗ್ರಾಪಂ ಸದಸ್ಯರ ಗೌರವಧನವನ್ನು ಹೆಚ್ಚಿಸಬೇಕು ಹಾಗೂ ತಿಂಗಳಿಗೊಮ್ಮೆ ಸಕಾಲಕ್ಕೆ ಕೊಡಬೇಕು ಎಂದು ಒತ್ತಾಯಿಸಿದರು. ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಾಗುತ್ತಿರುವ ಸಮಸ್ಯೆಗಳನ್ನು ಅಧಿಕಾರಿ, ಸದಸ್ಯರ ಸಮ್ಮುಖದಲ್ಲಿಯೇ ಬಗೆಹರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳ ಸಭೆ ನಡೆಸಲಾಗುತ್ತಿದೆ ಎಂದರು.
ಈಗಾಗಲೇ ಜಿಲ್ಲೆಯ ಸವಣೂರಿನ ಕಾರಡಗಿ, ಶಿಗ್ಗಾಂವಿಯ ಹುಲಗೂರು, ಬ್ಯಾಡಗಿಯ ಮೊಟೆಬೆನ್ನೂರು ಮತ್ತು ಶಿಡೇನೂರ ಜಿಪಂ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಪ್ರಮುಖವಾಗಿ ಸ್ಮಶಾನ ಜಾಗೆ ಸಮಸ್ಯೆ, ಸಾಮೂಹಿಕ ಕಣ ನಿರ್ಮಾಣ, ಆಟದ ಮೈದಾನಕ್ಕಿರುವ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ತಾಪಂ ಕಾರ್ಯನಿರ್ವಹಣಾಧಿಕಾರಿ ಮತ್ತು ಗ್ರಾಪಂ, ತಾಪಂ ಸದಸ್ಯರೆಲ್ಲರ ಸಮ್ಮುಖದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲಾಗುವುದು. ಈ ಸಭೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದರು.
ಸೋಮವಾರ ಹಾವೇರಿಯ ಕಬ್ಬೂರು ಮತ್ತು ಕಾಗಿನೆಲೆ ಜಿಪಂ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳ ಸಭೆ ನಡೆಸಲಾಗುವುದು. ಬಳಿಕ ಪುರಸಭೆಗಳ ಸಮಸ್ಯೆಗಳ ಬಗ್ಗೆಯೂ ಸಭೆ ನಡೆಸಲಾಗುವುದು ಎಂದರು.
ಗ್ರಾಮೀಣಾಭಿವೃದ್ಧಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಯೋಜನೆಗಳ ಉಪಯೋಗ ಎಲ್ಲರಿಗೂ ತಲುಪಿಸುವ ದೃಷ್ಟಿಯಿಂದ ಈ ರೀತಿ ಜಿಪಂ ವ್ಯಾಪ್ತಿಯಲ್ಲಿ ಸಭೆ ನಡೆಸಲು ಸ್ವತಃ ನಿರ್ಧರಿಸಿರುವುದಾಗಿ ಶ್ರೀನಿವಾಸ ಮಾನೆ ತಿಳಿಸಿದರು.
ನಗರಸಭೆ ಅಧ್ಯಕ್ಷ ಐ.ಯು. ಪಠಾಣ, ಉಪಾಧ್ಯಕ್ಷೆ ರತ್ನಾ ಭೀಮಕ್ಕನವರ, ಸದಸ್ಯರಾದ ರಮೇಶ ಕಡಕೋಳ, ಸಂಜೀವ ನೀರಲಗಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

