ಸಮಾನ ಶಿಕ್ಷಣ ವ್ಯವಸ್ಥೆ ನೀಡಿ: ಅನಂತನಾಯಕ್
ಹಾವೇರಿ: ಐಸಿಎಸ್ಸಿ, ಸಿಬಿಎಸ್ಸಿ, ಕೇಂದ್ರೀಯ, ನವೋದಯ, ಸೈನಿಕ, ಮೊರಾರ್ಜಿ, ರಾಜ್ಯದಲ್ಲಿ ಇತ್ಯಾದಿ ಪಠ್ಯಕ್ರಮ ಹೇರುವ ಮೂಲಕ ಶೈಕ್ಷಣಿಕ ಅಸಮಾನತೆ ಸೃಷ್ಠಿ ಮಾಡುತ್ತಿದ್ದಾರೆ. ಬಡವ, ಶ್ರೀಮಂತ ತಾರತಮ್ಯವಿಲ್ಲದ, ಸಮಾನ ಶಿಕ್ಷಣ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದು ಎಸ್ಎಫ್ಐ ರಾಜ್ಯಾಧ್ಯಕ್ಷ ಅನಂತನಾಯಕ್ ಹೇಳಿದರು.
ಅವರು ಮಂಗಳವಾರ ನಗರದ ಬಾಬಾಸಾಹೇಬ ಅಂಬೇಡ್ಕರ್ ಸಭಾಭವನದಲ್ಲಿ ನಡೆದ ಎಸ್ಎಫ್ಐ 6ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಶಿಕ್ಷಣ ವ್ಯವಸ್ಥೆಯ ಪುರಾತನ ಕಾಲದ ಚಾತುರ್ವಣ್ಯ ಪದ್ಧತಿಯ ಪ್ರತಿಬಿಂಭವಾಗಿದ್ದು, ಅಂದು ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಹೆಸರಿನಲ್ಲಿ ಅಸಮಾನತೆಯನ್ನು ಪ್ರತಿಪಾದಿಸಲಾಗುತ್ತಿತ್ತು. ಸಂವಿಧಾನ ಆಶಯಕ್ಕೆ ವಿರುದ್ಧವಾಗಿ ಶಿಕ್ಷಣದ ಮಾರಾಟ ಮಾಡುತ್ತಿದ್ದಾರೆ. ಸರ್ಕಾರ ಶಿಕ್ಷಣದ ವ್ಯಾಪಾರಕ್ಕೆ ಕಡಿವಾಣ ಹಾಕುತ್ತಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳೇ ಸರ್ಕಾರವನ್ನು ನಿಯಂತ್ರಿಸುವಂತಹ ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಿಕ್ಷಣ ಬಲಿಷ್ಠಗೊಳಿಸಲು ಐಕ್ಯ ಚಳುವಳಿ ಮಾಡಬೇಕಿದೆ ಎಂದರು. ಸರ್ಕಾರಿ ಶಾಲೆ, ಕಾಲೇಜು, ವಿಶ್ವ ವಿದ್ಯಾಲಯಗಳನ್ನು ಕಡೆಗಣಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆಯ ಮುಕ್ತ ಅವಕಾಶ ನೀಡುತ್ತಿದ್ದು ಬಡವರನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರವಾಗಿದೆ. ಶಿಕ್ಷಣಕ್ಕೆ ಅಗತ್ಯ ಹಣಕಾಸನ್ನು ಒದಗಿಸುವಲ್ಲಿ ರಾಜ್ಯ, ಕೇಂದ್ರ ಸರ್ಕಾರಗಳು ವಿಫಲವಾಗಿವೆ ಹಾಗಾಗಿ ಶಾಲೆ, ಕಾಲೇಜು ವಿವಿ, ಹಾಸ್ಟೆಲ್ಗಳು ಸೌಲಭ್ಯದಿಂದ ವಂಚಿತವಾಗಿವೆ ಎಂದು ದೂರಿದರು.
ಫೆ. 14ರಿಂದ 17ರ ವರೆಗೆ ಕೋಲಾರದಲ್ಲಿ ಶಿಕ್ಷಣದ ವ್ಯಾಪಾರೀಕರಣದ ವಿರುದ್ಧ, ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ಎಸ್ಎಫ್ಐನ 13ನೇ ರಾಜ್ಯಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಸಾಹಿತಿಗಳು, ಪ್ರಗತಿಪರ ಲೇಖಕರು ಭಾಗವಹಿಸಲಿದ್ದಾರೆ ಎಂದರು.
ಸಿಐಟಿಯು ಜಿಲ್ಲಾ ಸಂಚಾಲಕ ನಾರಾಯಣ ಕಾಳೆ ಮಾತನಾಡಿ, ರಾಜ್ಯದಲ್ಲಿ 1.70 ಲಕ್ಷ ಶಿಕ್ಷರ ಹುದ್ದೆಗಳು ಖಾಲಿ ಇವೆ. ಸರ್ಕಾರ ಭರ್ತಿ ಮಾಡಿಕೊಳ್ಳಬೇಕು ಎಂದರು, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಪೂಜಾರ ಅಧ್ಯಕ್ಷತೆ ವಹಿಸಿದ್ದರು. ಡಾ. ಐ.ಎ. ಲೋಕಾಪುರ, ರೇಣುಕಾ ಕಹಾರ ಮುಂತಾದವರು ಇದ್ದರು. ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ಸುಭಾಸ ಎಂ, ಪ್ರಸನ್ನ ಹಿರೇಮಠ ನಿರ್ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

