ಕಾಂಗ್ರೆಸ್ನಿಂದ ಮಾತ್ರ ಸಮರ್ಥ ಆಡಳಿತ
ಬ್ಯಾಡಗಿ: ಕಾಂಗ್ರೆಸ್ಸೇತರ ಪಕ್ಷಗಳಿಂದ ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಯಾವ ಪಕ್ಷಕ್ಕೂ ಇಲ್ಲ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಮಂಗಳವಾರ ಪಟ್ಟಣದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
ದೇಶದ ಮತದಾರರು ಬಹಳಷ್ಟು ಜಾಗ್ರತರಾಗಿದ್ದಾರೆ. ಮೋದಿ ಪರ ನಡೆಯುವ ಯಾವುದೇ ಪ್ರಚಾರ ತಂತ್ರಗಳು ಫಲ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷ ಕಳೆದ ಬಾರಿಗಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಚಾರಕ್ಕಿಂತ ಅಪಪ್ರಚಾರದಲ್ಲಿ ತೊಡಗಿರುವ ಬಿಜೆಪಿ ಇಲ್ಲಸಲ್ಲದ ಆರೋಪಗಳಲ್ಲಿ ತೊಡಗಿದ್ದನ್ನು ಖಂಡಿಸಿದ ಅವರು, ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ನ ಜನಪರ ಹಾಗೂ ಬಡವ, ದೀನದಲಿತ ಹಾಗೂ ಹಿಂದುಳಿದವರ ಕಲ್ಯಾಣಕ್ಕಾಗಿ ಕೈಗೊಂಡ ಕಾರ್ಯಕ್ರಮಗಳನ್ನು ಮನೆ ಮನೆಗೆ ತಿಳಿಸುವ ಕೆಲಸವಾಗಬೇಕಾಗಿದೆ ಎಂದರು. ತಾಲೂಕಿನಲ್ಲಿ ಯಾವುದೇ ಪ್ರಮುಖ ನದಿಗಳು ಹರಿದಿಲ್ಲ. ಹೀಗಾಗಿ ಕೆರೆಗಳನ್ನು ತುಂಬಿಸುವ ಕೆಲಸಕ್ಕೆ ಶೀಘ್ರದಲ್ಲೇ ಚಾಲನೆ ದೊರೆಯಲಿದೆಯಲ್ಲದೇ ಅದರ ಜತೆಗೆ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು ಕೂಡಲೇ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲಿದ್ದೇವೆ ಎಂದರು.
ಹುಸೇನಸಾಬ್ ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ದಾನಪ್ಪ ಚೂರಿ, ಎಸ್.ಸಿ. ಶಿಡೇನೂರ, ರಮೇಶ ಸುತ್ತಕೋಟಿ, ರೇಖಾ ದೊಡ್ಡಮನಿ, ಬಸವರಾಜ ಸವಣೂರ, ರುದ್ರಪ್ಪ ಹೊಂಕಣ, ಹುಚ್ಚನಗೌಡ್ರ ಲಿಂಗನಗೌಡ್ರ, ಚೆನ್ನಮ್ಮ ಎಮ್ಮೇರ ಜುಲೇಖಾಭಿ ಹುರಕಡ್ಲಿ, ಮಂಜುನಾಥ ಭೋವಿ, ಶೇಖಣ್ಣ ಮೈಲಾರ, ಮಲ್ಲನಗೌಡ್ರ ಪಾಟೀಲ, ಬೀರಪ್ಪ ಬಣಕಾರ, ಹನುಮಗೌಡ ಗೌಡ್ರ, ಲಿಂಗಪ್ಪ ಕೊಂಬಳಿ, ಸುರೇಶ ಹುಳಬುತ್ತಿ ವೇದಿಕೆಯಲ್ಲಿದ್ದರು. ಸುರೇಶಗೌಡ ಪಾಟೀಲ ಸ್ವಾಗತಿಸಿದರು. ಹನುಮಂತ ಲಮಾಣಿ ನಿರೂಪಿಸಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

