ಸುದ್ದಿ ಸಂಕ್ಷೇಪ
ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಾವೇರಿ: ಭಾರತ ಸರ್ಕಾರವು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವಂಥ ವ್ಯಕ್ತಿಗಳನ್ನು ಗುರುತಿಸಿ ರಾಜೀವಗಾಂಧಿ ಮಾನವ ಸೇವಾ ಪ್ರಶಸ್ತಿಯನ್ನು ಮೂರು ವ್ಯಕ್ತಿಗಳಿಗೆ ನೀಡಿ ಗೌರವಿಸುತ್ತಿದೆ. ಪ್ರಶಸ್ತಿಯನ್ನು ಪ್ರತಿವರ್ಷ ದಿ. ರಾಜೀವ್ಗಾಂಧಿ ಜನ್ಮ ದಿನವಾದ ಆ. 20ರಂದು ಘೋಷಿಸಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಲಕ್ಷ ರು. ನಗದು, ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಪ್ರಶಸ್ತಿಗೆ ಆಯ್ಕೆ ಮಾಡುವ ಮೂರು ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ಧಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕಾರ್ಯನಿರ್ವಹಿಸಿರಬೇಕು. ರಾಜೀವ್ಗಾಂಧಿ ಮಾನವಸೇವಾ ಪ್ರಶಸ್ತಿಗಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಉಪನಿರ್ದೇಶಕರು, ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಿಂದ ಪಡೆದು, ಮಾ. 15 ರೊಳಗೆ ಸಲ್ಲಿಸಬೇಕೆಂದು ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

