ಇಂದು, ನಾಳೆ ಚನ್ನಮ್ಮ ವಿಜಯೋತ್ಸವ
ಬ್ಯಾಡಗಿ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ನಗರದಲ್ಲಿ ಫೆ. 17 ಹಾಗೂ 18ರಂದು ವೀರಶೈವ ಪಂಚಮಸಾಲಿ ಜಗದ್ಗುರುಗಳ 6ನೇ ವರ್ಷದ ಪೀಠಾರೋಹಣ ಮಹೋತ್ಸವ, ರಾಷ್ಟ್ರೀಯ ಭಾವೈಕ್ಯತಾ ಸಮಾವೇಶ ಹಾಗೂ ವೀರರಾಣಿ ಕಿತ್ತೂರ ಚನ್ನಮ್ಮ ಅವರ 190ನೇ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ. ತಾಲೂಕಿನ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ತಾಲೂಕು ವೀರಶೈವ ಪಂಚಮಸಾಲಿ ಸಂಘದ ಅಧ್ಯಕ್ಷ ನಾಗನಗೌಡ ಪಾಟೀಲ ಹಾಗೂ ಹರಸೇನೆ ಅಧ್ಯಕ್ಷ ವೀರಭದ್ರಗೌಡ ಹೊಮ್ಮರಡಿ ಕೋರಿದ್ದಾರೆ.
ಲಾರಿ ಹರಿದು ಮಹಿಳೆ ಸಾವು
ಹಾವೇರಿ: ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಲಾರಿಯೊಂದು ಹಾಯ್ದು ಮಹಿಳೆಯೊಬ್ಬಳು ಮೃತಪಟ್ಟ ಘಟನೆ ತಾಲೂಕಿನ ನೆಲೋಗಲ್ಲ ಗ್ರಾಮದ ಸಮೀಪ ಭಾನುವಾರ ಸಂಭವಿಸಿದೆ. ಹಾವೇರಿ ನಗರದ ನಿವಾಸಿ ಮಹೇಶ್ವರಿ (45) ಮೃತಪಟ್ಟ ಮಹಿಳೆ. ನೆಲೋಗಲ್ಲ ಗ್ರಾಮಕ್ಕೆ ಮದುವೆ ಸಮಾರಂಭಕ್ಕೆಂದು ತೆರಳುತ್ತಿದ್ದ ಈ ಮಹಿಳೆ ನೆಲೋಗಲ್ಲ ಕ್ರಾಸ್ ಸಮೀಪ ಬಸ್ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಾಣಿಬೆನ್ನೂರಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಲಾರಿಯೊಂದು ಹಾಯ್ದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿರಕಪ್ಪ ಸಂಕಮ್ಮನವರ ನಿಧನ
ಹಾವೇರಿ: ಇಲ್ಲಿನ ಶಿವಬಸವ ನಗರದ ನಿವಾಸಿ, ಸವಣೂರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ತಿರಕಪ್ಪ ಹನುಮಂತಪ್ಪ ಸಂಕಮ್ಮನವರ (48) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ.
19ರಂದು ಶಿವಾಜಿ ಜಯಂತಿ
ಹಾವೇರಿ: ಜಿಲ್ಲಾಡಳಿತ, ಜಿಪಂ, ಕನ್ನಡ-ಸಂಸ್ಕೃತಿ ಇಲಾಖೆಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಫೆ. 19ರಂದು ಬೆಳಗ್ಗೆ 9-30ಕ್ಕೆ ನಗರದ ನೌಕರರ ಭವನದಲ್ಲಿ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಅವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದು, ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರಾದ ಶಿವಕುಮಾರ ಉದಾಸಿ, ಪ್ರಹ್ಲಾದ ಜೋಶಿ, ಶಾಸಕರಾದ ಕೆ.ಬಿ. ಕೋಳಿವಾಡ, ಮನೋಹರ ತಹಸೀಲ್ದಾರ್, ಬಸವರಾಜ ಶಿವಣ್ಣನವರ, ಬಸವರಾಜ ಬೊಮ್ಮಾಯಿ, ಯು.ಬಿ. ಬಣಕಾರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ನಾಗರಾಜ ಛಬ್ಬಿ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ನಗರಸಭೆ ಅಧ್ಯಕ್ಷ ಐ.ಯು. ಪಠಾಣ, ಜಿಪಂ ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ನಗರಸಭೆ ಉಪಾಧ್ಯಕ್ಷೆ ರತ್ನಾ ಭೀಮಕ್ಕನವರ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜವ್ವ ಆಡಿನ, ತಾಪಂ ಅಧ್ಯಕ್ಷೆ ಲಕ್ಷ್ಮವ್ವ ಮೇಲ್ಮುರಿ, ಉಪಾಧ್ಯಕ್ಷ ಪ್ರಕಾಶ ಬಣಕಾರ ಪಾಲ್ಗೊಳ್ಳುವರೆಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

