ಹಾವೇರಿ

ನಾಳೆಯಿಂದ ಶರಣ ಸಂಸ್ಕೃತಿ ಉತ್ಸವ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಫೆ. 17
ಲಿಂ. ಜಗದ್ಗುರು ನೈಘಂಟಿನ ಸಿದ್ದಬಸವ ಮುರುಘರಾಜೇಂದ್ರ ಸ್ವಾಮೀಜಿ ಹಾಗೂ ಅಥಣಿ ಮುರುಘೇಂದ್ರ ಶಿವಯೋಗಿಗಳ ಸ್ಮರಣೋತ್ಸವದ ನಿಮಿತ್ತ ಫೆ. 19ರಿಂದ 22ರವರೆಗೆ ನಗರದ ಹೊಸಮಠದಲ್ಲಿ ಚಿತ್ರದುರ್ಗದ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ಶರಣ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಹೊಸಮಠದ ಶಾಂತಲಿಂಗ ಸ್ವಾಮೀಜಿ ಹೇಳಿದರು.
ನಗರದ ಮುರುಘರಾಜೇಂದ್ರ ಮಠದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 19ರಂದು ಸಂಜೆ 6 ಗಂಟೆಗೆ ನಡೆಯುವ ಸಾಂಸ್ಕೃತಿಕ ಸಂಜೆ ನಾಟಕೋತ್ಸವದ ಸಾನ್ನಿಧ್ಯವನ್ನು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ರಟ್ಟಿಹಳ್ಳಿ ಕಬ್ಬಿಣ ಕಂಥಿಮಠದ ಶಿವಲಿಂಗ ಶಿವಾಚಾರ್ಯರು ವಹಿಸುವರು. ರಂಗ ನಿರ್ದೇಶಕ ಆಲೇಮನೆ ಸುಂದರಮೂರ್ತಿ ಉದ್ಘಾಟಿಸುವರು. ಮಾಜಿ ಶಾಸಕ ನೆಹರೂ ಓಲೇಕಾರ, ರಾಜು ಕುನ್ನೂರ, ಎಸ್ಪಿ ಎನ್. ಶಶಿಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಶಶಿಕಲಾ ಹುಡೇದ, ನಗರಸಭೆ ಅಧ್ಯಕ್ಷ ಐ.ಯು. ಪಠಾಣ ಪಾಲ್ಗೊಳ್ಳುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಸವರಾಜ ಭಜಂತ್ರಿ ಅವರನ್ನು ಸನ್ಮಾನಿಸಲಾಗುವುದು. ಶಿಗ್ಗಾಂವಿ ಸಂಗನಬಸವ ಜಾನಪದ ಕಲಾಬಳಗ ಜಾಗೃತಿ ಗೀತೆ ಹಾಡುವರು. ಡಾ. ಶಿವಮೂರ್ತಿ ಮುರುಘಾ ಶರಣರು ರಚಿಸಿರುವ ಮೌಢ್ಯ ಬಿಡಿ, ನಂಬಿಕೆ ಇಡಿ ಎಂಬ ನಾಟಕ ಪ್ರದರ್ಶನ ನಡೆಯಲಿದೆ ಎಂದರು.
ಫೆ. 20ರಂದು ಸಂಜೆ 6 ಗಂಟೆಗೆ ನಡೆಯುವ ನಾಟಕೋತ್ಸವ ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ಅಗಡಿ ಪ್ರಭುಸ್ವಾಮಿಮಠದ ಸಂಗನಬಸವ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ವಹಿಸುವರು. ಶಾಸಕ ಬಸವರಾಜ ಶಿವಣ್ಣನವರ, ರಮೇಶ ಭಾಪನ್, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ತಹಸೀಲ್ದಾರ್ ಪಂಪನಗೌಡ ಮೆಲ್ಸೀಮೆ, ಸಾಹಿತಿ ಸತೀಶ ಕುಲಕರ್ಣಿ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ ಭಾಗವಹಿಸುವರು. ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ ರಚಿಸಿರುವ ತಲ್ಲಣಿಸದಿರು ಕಂಡ್ಯಾ ತಾಳು ಮನವೆ ಎಂಬ ನಾಟಕ ಪ್ರದರ್ಶನ ನಡೆಯಲಿದೆ ಎಂದರು.
ಫೆ. 21ರಂದು ಬೆಳಗ್ಗೆ ಮುರುಗೀಸ್ವಾಮಿಮಠದ ಆವರಣದಲ್ಲಿ ಬಸವತತ್ವ ಧ್ಜಜಾರೋಹಣ ನಡೆಯಲಿದೆ. ಡಾ. ಶಿವಮೂರ್ತಿ ಮುರುಘಾ ಶರಣರು ಸಾನ್ನಿಧ್ಯ ವಹಿಸುವರು. ಹೆಬ್ಬಾಳ ವಿರಕ್ತಮಠದ ಮಹಾಂತರುದ್ರೇಶ್ವರ ಸ್ವಾಮೀಜಿ ಧ್ವಜಾರೋಹಣ ನೆರವೇರಿಸುವರು. ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ರವಿಕುಮಾರ ಬೆಲ್ಲದ, ಎಸ್.ಆರ್. ಪಾಟೀಲ, ಎಸ್.ಎ. ಹುದ್ದಾರ, ನಾಗೇಂದ್ರ ಮಾಳಿ ಉಪಸ್ಥಿತರಿರುವರು. ಬೆಳಗ್ಗೆ 11 ಗಂಟೆಗೆ ಹೊಸಮಠದ ಸಮುದಾಯ ಭವನದಲ್ಲಿ ಪದವೀಧರ ವಿದ್ಯಾರ್ಥಿಗಳೊಂದಿಗೆ ಹಾಗೂ ಮಧ್ಯಾಹ್ನ 2.30ಕ್ಕೆ ಪ್ರೌಢಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಲಿದೆ ಎಂದು ತಿಳಿಸಿದರು. ಅಂದು ಸಂಜೆ 6 ಗಂಟೆಗೆ ಜಾನಪದ ಸಮಾವೇಶ ನಡೆಯಲಿದೆ. ಅಧ್ಯಕ್ಷತೆಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು, ಸಮ್ಮುಖವನ್ನು ದೊಡ್ಡಹುಣಿಸೆ ಕಲ್ಮಠದ ಚನ್ನಬಸವ ಸ್ವಾಮೀಜಿ ವಹಿಸುವರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಸಚಿವ ಡಾ. ಡಿ.ಬಿ. ನಾಯಕ ಉದ್ಘಾಟಿಸುವರು. ಸಂಸದ ಶಿವಕುಮಾರ ಉದಾಸಿ, ಎಂಎಲ್‌ಸಿ ಸದಸ್ಯ ಸೋಮಣ್ಣ ಬೇವಿನಮರದ, ಮಾಜಿ ಶಾಸಕ ಬಿ.ಸಿ. ಪಾಟೀಲ, ಶ್ರೀಶೈಲ ಹುದ್ದಾರ, ಶಂಕರ ಬಿರಾದಾರ, ಸಾಗರ ವಾಲಿ, ಹಾಸ್ಯನಟ ದೊಡ್ಡಣ್ಣ ಪಾಲ್ಗೊಳ್ಳುವರು. ಡಾ. ಸಿದ್ದನಗೌಡ ಪಾಟೀಲ, ಮಲ್ಲಿಕಾರ್ಜುನ ಮೇಲ್ಮರಿ, ಕಡಬ ಶ್ರೀನಿವಾಸ ಅವರನ್ನು ಸನ್ಮಾನಿಸಲಾಗುವುದು. ನಂತರ ಜಾನಪದ ಕಲಾ ಪ್ರದರ್ಶನ ನಡೆಯಲಿದೆ ಎಂದು ಶ್ರೀಗಳು ತಿಳಿಸಿದರು.
ಫೆ. 22ರಂದು ಬೆಳಗ್ಗೆ 10.30 ಗಂಟೆಗೆ ಮುರುಗೀಸ್ವಾಮಿಮಠದ ಆವರಣದಲ್ಲಿ ಹೊಸಮಠ, ಕೆಎಂಎಫ್ ಧಾರವಾಡ, ಪಶು ಸಂಗೋಪನಾ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಜಲಾನಯನ ಇಲಾಖೆಯ ಆಶ್ರಯದಲ್ಲಿ ಜಾನುವಾರು ಮೇಳ, ಫಲಪುಷ್ಪ, ಕೃಷಿ ವಸ್ತು ಹಾಗೂ ಶ್ವಾನಗಳ ಪ್ರದರ್ಶನ ನಡೆಯಲಿದೆ. ಡಾ. ಶಿವಮೂರ್ತಿ ಮುರುಘಾ ಶರಣರು ಉದ್ಘಾಟಿಸುವರು. ಮಾಜಿ ಎಂಎಲ್‌ಸಿ ಶಿವರಾಜ ಸಜ್ಜನರ, ಜಿಪಂ ಸಿಇಓ ಕೆ.ಬಿ. ಅಂಜನಪ್ಪ, ಜಂಟಿ ಕೃಷಿ ನಿರ್ದೇಶಕ ಗಣೇಶ ನಾಯಕ, ಕರಿಯಲ್ಲಪ್ಪ ಕೊರಚರ, ಮಂಜುನಾಥ, ಡಾ. ಬಸವರಾಜ, ಡಾ. ರಾಮಚಂದ್ರಪ್ಪ ಭಟ್ಟ, ಶೋಭಾ ನಿಸ್ಸೀಮಗೌಡರ, ವೀರೇಶ್ವರಿ ಸುಳ್ಳಳ್ಳಿ ಪಾಲ್ಗೊಳ್ಳುವರು ಎಂದರು.
ಫೆ. 22ರ ಸಂಜೆ 6 ಗಂಟೆಗೆ ಬಸವತತ್ವ ಸಮಾವೇಶ ಹಾಗೂ ಡಾ. ಶಿಮುಶ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಡಾ. ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆ ವಹಿಸುವರು. ಖ್ಯಾತ ಸಾಹಿತಿ ಡಾ. ವೀರಣ್ಣ ರಾಜೂರ ಅವರಿಗೆ ಡಾ. ಶಿಮುಶ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕುವೆಂಪು ವಿವಿ ಕುಲಸಚಿವೆ ಡಾ. ಮಲ್ಲಿಕಾ ಘಂಟಿ ಅವರು ಶಿವಶರಣಿಯರ ಸಾಧನೆಗಳ ಕುರಿತು, ಡಾ. ಅವಿನಾಶಕವಿ ಅವರು ಬಸವಾದಿ ಶರಣರು ಪ್ರತಿಪಾದಿಸಿದ ಶಿವಯೋಗ ಎಂಬ ವಿಷಯದ ಬಗ್ಗೆ ವಿಷಯ ಮಂಡಿಸುವರು. ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಬೊಮ್ಮಾಯಿ, ಯು.ಬಿ. ಬಣಕಾರ, ನೆಹರು ಯುವ ಕೇಂದ್ರದ ಮಹಾನಿರ್ದೇಶಕ ಸಲೀಂ ಅಹ್ಮದ್, ಈಶ್ವರ ಸಾಣೀಕೊಪ್ಪ ಉಪಸ್ಥಿತರಿರುವರು. ಡಾ. ಸೋಮಶೇಖರಪ್ಪ ಎಚ್.ಕೆ. ಅವರನ್ನು ಸನ್ಮಾನಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.
ಶರಣ ಸಂಸ್ಕೃತಿ ಉತ್ಸವ ಸಮಿತಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕಾರ್ಯಾಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರ, ಪರಮೇಶಪ್ಪ ಮೇಗಳಮನಿ, ಧಾರವಾಡ ಕೆಎಂಎಫ್ ಅಧ್ಯಕ್ಷ ಬಸವರಾಜ ಅರಬಗೊಂಡ, ನಾಗೇಂದ್ರ ಕಟಕೋಳ, ಬಸವರಾಜ ಬೆಳವಡಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.