ಆರ್ಥಿಕ ಕ್ಷೇತ್ರದ ಪ್ರಗತಿಯೊಂದೇ ಅಭಿವೃದ್ಧಿಯಲ್ಲ
ಶಿಗ್ಗಾಂವಿ: ಅಭಿವೃದ್ಧಿ ಎಂಬುದು ಕೇವಲ ಆರ್ಥಿಕ ಕ್ಷೇತ್ರದ ಪ್ರಗತಿ ಮಾತ್ರವಲ್ಲ ಎಂದು ಮದ್ರಾಸ್ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ನಿವೃತ್ತ ನಿರ್ದೇಶಕರಾದ ಪ್ರೊ. ವಿ.ಕೆ. ನಟರಾಜ ಅಭಿಪ್ರಾಯಪಟ್ಟರು.
ತಾಲೂಕಿನ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ಸೋಮವಾರದಿಂದ ಹೈಯರ್ ಎಜ್ಯುಕೇಶನ್ ಆಂಡ್ ಇನ್ಕ್ಲ್ಯೂಸಿವ್ ಕರ್ನಾಟಕ ವಿಷಯದ ಕುರಿತು ಆಯೋಜಿಸಿದ ಮೂರು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಣಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಭಿವೃದ್ಧಿ ಅಧ್ಯಯನ ಎಂದರೆ ಆರ್ಥಿಕ ಕ್ಷೇತ್ರದ ಬಗೆಗೆ ಮಾತ್ರ ಅಧ್ಯಯನ ಮಾಡುವುದಲ್ಲ. ಅರ್ಥಶಾಸ್ತ್ರ ಸೇರಿದಂತೆ ಸಮಾಜ, ಶಿಕ್ಷಣ, ವೈದ್ಯಕೀಯ, ಮಹಿಳಾ ಅಧ್ಯಯನ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ ಮುಂತಾದ ಕ್ಷೇತ್ರಗಳ ಅಭಿವೃದ್ಧಿಯನ್ನೂ ಒಳಗೊಂಡಿದ್ದು, ಅದು ಸದಾ ವಿಕಸಿತಗೊಳ್ಳುವ ಜ್ಞಾನ ಕ್ಷೇತ್ರವಾಗಿದೆ ಎಂದು ಅವರು ಪ್ರತಿಪಾದಿಸಿದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಂಬಳಿಕೆ ಹಿರಿಯಣ್ಣ ಅಧ್ಯಕ್ಷತೆವಹಿಸಿದ್ದರು. ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಹಾಗೂ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ. ಚಂದ್ರ ಪೂಜಾರಿ ಮಾತನಾಡಿ, ಇಂದಿನ ಶಿಕ್ಷಣ ಮನಸ್ಸನ್ನು ಹದಗೊಳಿಸುವಲ್ಲಿ ಸಂಪೂರ್ಣ ಸೋತಿದೆ. ಬದುಕಿನ ವಿವಿಧ ಮಜುಲುಗಳಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳನ್ನು ಎದುರಿಸುವ ಆತ್ಮವಿಶ್ವಾಸ ಮತ್ತು ಮಾನಸಿಕ ಸ್ಥೈರ್ಯವನ್ನು ತುಂಬುವ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಬೇಕಾಗಿದೆ ಎಂದರು.
ಶ್ರೀ ಕೆ.ಎಲ್. ಲಕ್ಷ್ಮಣ ಪ್ರಾರ್ಥಿಸಿದರು. ವಿಶ್ವವಿದ್ಯಾಲಯದ ಹಿರಿಯ ಸಂಶೋಧನಾ ಅಧಿಕಾರಿ ಡಾ. ಕೆ. ಪ್ರೇಮಕುಮಾರ ಸ್ವಾಗತಿಸಿದರು. ಎಂ.ಬಿ.ಎ. ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ಪ್ರಕಾಶ ಹೊಸಮನಿ ನಿರೂಪಿಸಿದರು. ಡಾ. ವೃಷಭಕುಮಾರ್ ವಂದಿಸಿದರು. ಕುಲಸಚಿವ ಪ್ರೊ. ಡಿ.ಬಿ. ನಾಯಕ, ಮೌಲ್ಯಮಾಪನ ಕುಲಸಚಿವ ಪ್ರೊ. ಸ.ಚಿ. ರಮೇಶ, ಡಾ.ಜಿ. ಮೋಹನ್, ಪಿಎಚ್ಡಿ ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

