ಉಪ ಲೋಕಾಯುಕ್ತರಿಂದ ಕಾಮಗಾರಿ ವೀಕ್ಷಣೆ
ರಾಣಿಬೆನ್ನೂರು: ಉಪ ಲೋಕಾಯುಕ್ತ ಎಸ್.ಬಿ. ಮಜ್ಜಗೆ ಇಲ್ಲಿನ ನಗರಸಭೆಯಿಂದ ವಿವಿಧ ವಾರ್ಡ್ಗಳಲ್ಲಿ ಅಭಿವೃದ್ಧಿಪಡಿಸಿರುವ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು.
ನಗರಸಭೆಯ ಪೌರಾಯುಕ್ತರನ್ನು, ಅಭಿಯಂತರನ್ನು ಹಾಗೂ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಹಣ ಕೇಳುತ್ತಿದ್ದಾರೆಂದು ಸಾರ್ವಜನಿಕರು ಆರೋಪಿಸಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಬುಧವಾರ ಬೆಳಗ್ಗೆ 11 ಗಂಟೆಯಿಂದ 1. 30ರವರೆಗೆ ನಗರದ ವಿವಿಧ ವಾರ್ಡ್ಗಳಲ್ಲಿ ನಗರಸಭೆಯಿಂದ ಅಭಿವೃದ್ಧಿಪಡಿಸಿರುವ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿ, ಅಲ್ಲಿನ ಸಾರ್ವಜನಿಕರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದರು. ನಗರದ ಬಸ್ ನಿಲ್ದಾಣದ ಪಕ್ಕದಲ್ಲಿನ ಗಡಾದ ಪೆಟ್ರೋಲ್ ಬಂಕ್ ಎದುರು ನಗರಸಭೆಯಿಂದ ನಿರ್ಮಿಸಿರುವ 2 ವರ್ಷದಿಂದ ತುಂಬಿ ತುಳುಕುತ್ತಿರುವ ಗಟಾರ್ ನೋಡಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದರು. ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ. ಕಾಮಗಾರಿ ಗುತ್ತಿಗೆ ನೀಡಿರುವ ಅಧಿಕಾರಿಗಳು ಕಾಮಗಾರಿ ಮುಕ್ತಾಯಗೊಂಡ ನಂತರ ಹಾಗೂ ಕಾಮಗಾರಿಯನ್ನು ನಿರ್ವಹಿಸುತ್ತಿದ್ದ ಸಮಯದಲ್ಲಿ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸದಿರುವುದು ಕಾಮಗಾರಿಗಳು ಕಳಪೆಯಾಗಲು ಕಾರಣವಾಗಿದೆ ಎಂದ ಲೋಕಾಯುಕ್ತರು ನಗರಸಭೆಯ ಪೌರಾಯುಕ್ತೆ ಅಶ್ವಿನಿ ಬಿ.ಎಂ, ಅಭಿಯಂತರಾದ ಬಿ.ಎಸ್. ಪಾಟೀಲ, ಪರಿಸರ ಅಭಿಯಂತರನ್ನು ಹಾಗೂ ನಗರಸಭೆ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಹಲಗೇರಿ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಲೋಕಾಯುಕ್ತರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ರೋಗಿಗಳ ಯೋಗ ಕ್ಷೇಮ ವಿಚಾರಿಸಿ ಮತ್ತು ಸರ್ಕಾರಿ ವೈದ್ಯರ ಸೇವೆಯ ಕುರಿತು ಸಮಗ್ರ ಮಾಹಿತಿಯನ್ನು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಪರಶುರಾಮ ಕೋಕಾಳೆ ಮಾತನಾಡಿ, ವೈದ್ಯರು ಸಾರ್ವಜನಿಕರಿಗೆ ವೈದ್ಯಕೀಯ ಸೇವೆಗಾಗಿ ಹಣ ಕೇಳುತ್ತಾರೆಂದು ತಿಳಿಸಿದ್ದರಿಂದ ಕೋಪಗೊಂಡ ಉಪ ಲೋಕಾಯುಕ್ತರು ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.
ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಅಭಿಯಂತರಾದ ಪಾಟೀಲ, ಶಂಕರಿಕೊಪ್ಪ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಲೋಕಾಯುಕ್ತ ಡಿವೈಎಸ್ಪಿ ನಾಗರಾಜ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

