ಹಾವೇರಿ

ಸರ್ಕಾರದ ಕ್ರಮಕ್ಕೆ ಖಂಡನೆ: ಪ್ರತಿಭಟನೆ

Published On :

ಬ್ಯಾಡಗಿ:  ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ಕಟ್ಟುವಂತೆ ಸುತ್ತೋಲೆ ಹೊರಡಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳ ರಿಯಾಯಿತಿ ಶುಲ್ಕ ಮರುಪಾವತಿಗೆ ವಿಧಿಸಿರುವ ಷರತ್ತು ಮರಳಿ ಪಡೆಯುವಂತೆ ಆಗ್ರಹಿಸಿ ಎಸ್‌ಎಫ್‌ಐ ತಾಲೂಕು ಘಟಕದ ಕಾರ್ಯಕರ್ತರು ಬುಧವಾರ ಪಟ್ಟಣದ ಹಳೆ ಪುರಸಭೆ ಎದುರು ಪ್ರತಿಭಟನೆ ನಡೆಸಿ, ಬಳಿಕ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಜುನಾಥ ಪೂಜಾರ, ಶುಲ್ಕ ಮರುಪಾವತಿಗೆ ವಿದ್ಯಾರ್ಥಿಗಳ ಅಂಕಗಳ ಮಾನದಂಡ ಮಾಡಿರುವುದು ಶಿಕ್ಷಣದ ವಿರೋಧಿ ನೀತಿಯಾಗಿದೆ. ಶಾಲೆಗಳಲ್ಲಿ ಗರಿಷ್ಠ ಹಾಜರಾತಿ ಹಾಗೂ ಸರ್ಕಾರದ ವಿರುದ್ಧ ಯಾವುದೇ ಪ್ರತಿಭಟನೆ ಮಾಡದಂತೆ ಎಚ್ಚರಿಸಲಾಗಿದ್ದು ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕು ಕಸಿದುಕೊಳ್ಳುವ ಹುನ್ನಾರ ಇದಾಗಿದೆ ಎಂದು ಆರೋಪಿಸಿದರು. ವಸತಿ ನಿಲಯಗಳಿಗೆ ಮೂಲ ಸೌಕರ್ಯ ಹಾಗೂ ಗುಣಮಟ್ಟದ ಆಹಾರ ಪೂರೈಸಲು ವಿಫಲವಾಗಿರುವ ಸರ್ಕಾರ ಅದನ್ನು ಸರಿಪಡಿಸುವ ಬದಲು ಬಡವರು ಹಾಗೂ ದಲಿತರು ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನಗತ್ಯ ಕರಾರು ಹಾಕಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಅಲ್ಲಿ ದೊರೆಯುತ್ತಿರುವ ಕಳಪೆ ಆಹಾರದಿಂದ ಇಂದು ವಸತಿ ನಿಲಯಗಳು ವಿದ್ಯಾರ್ಥಿಗಳಿಲ್ಲದೇ ಬಿಕೋ ಎನ್ನುತ್ತಿವೆ. ಇದನ್ನು ಸರ್ಕಾರ ಒಮ್ಮೆಯಾದರೂ ಕಣ್ತೆರೆದು ನೋಡಿದಿಯೇ ? ಎಂದು ಪ್ರಶ್ನಿಸಿದರು. ವಿದ್ಯಾರ್ಥಿಗಳ ಸಂವಿಧಾನಾತ್ಮಕ ಹಕ್ಕನ್ನು ಕಸಿದು ಕೊಳ್ಳುತ್ತಿರುವ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರಗಳನ್ನು ಕೈಬಿಡುವಂತೆ ಆಗ್ರಹಿಸಿದರು. ತಾಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಬೋವಿ, ಕಾರ್ಯದರ್ಶಿ ನಿಜಾಮುದ್ದೀನ್ ನೇಗಳೂರ, ಚಿದಾನಂದ ಹಿರೇಮಠ, ಮಂಜುನಾಥ ಲಿಂಗಣ್ಣನವರ, ರವಿಕಿರಣ ಪೂಜಾರ, ಚಂದ್ರು ಲಮಾಣಿ, ಮಂಜುನಾಥ ಹಾದಿಮನಿ, ಪೂರ್ಣಿಮಾ ಶೆಟ್ಟರ ಇನ್ನಿತರರು ಇದ್ದರು.
ಶಾಲೆಗಳಲ್ಲಿ ಗರಿಷ್ಠ ಹಾಜರಾತಿ ಹಾಗೂ ಸರ್ಕಾರದ ವಿರುದ್ಧ ಯಾವುದೇ ಪ್ರತಿಭಟನೆ ಮಾಡದಂತೆ ಎಚ್ಚರಿಸಲಾಗಿದ್ದು ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕು ಕಸಿದುಕೊಳ್ಳುವ ಹುನ್ನಾರ ಇದಾಗಿದೆ.       -ಪ್ರತಿಭಟನಾಕಾರರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.