ಹಾವೇರಿ

ಶಿಕ್ಷಕರ ಮಾರ್ಗದರ್ಶನ ಪಡೆದು ಉತ್ತಮ ಅಂಕಗಳಿಸಿ

Published On :

ಹಿರೇಕೆರೂರು:  ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಗಣಿತ ವಿಷಯದ ಬಗ್ಗೆ ಭಯ ಪಡದೆ ಶಿಕ್ಷಕರು ಕಲಿಸಿದ ಸುಲಭವಾಗಿ ಲೆಕ್ಕ ಬಿಡಿಸುವ ಕೌಶಲ್ಯ ಬೆಳೆಸಿಕೊಳ್ಳಬೇಕು. ಆ ಮೂಲಕ ಗಣಿತ ವಿಷಯವನ್ನು ಸುಲಭವಾಗಿ ಕಲಿಯಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ. ಆನಂದ ಹೇಳಿದರು.
ಅವರು ತಾಲೂಕು ಪ್ರೌಢಶಾಲಾ ಗಣಿತ ಶಿಕ್ಷಕರ ವೇದಿಕೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಿರೇಕೆರೂರು ಇವರ ಆಶ್ರಯದಲ್ಲಿ ಶುಕ್ರವಾರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಹಿರೇಕೆರೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ ಶಿಕ್ಷಕ- ವಿದ್ಯಾರ್ಥಿ ನೇರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕಿನ ಪ್ರತಿಯೊಂದು ಕೇಂದ್ರದಲ್ಲಿ ಎರಡು ಇಲ್ಲವೆ ಮೂರು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಸೇರಿಸಿ ಒಟ್ಟು 25 ಕೇಂದ್ರಗಳಲ್ಲಿ ನುರಿತ ಅನುಭವಿ ಶಿಕ್ಷಕರಿಂದ ಕನಿಷ್ಠ ಹಾಗೂ ಗರಿಷ್ಠ ಅಂಕಗಳಿಸುವ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿರೇಕೆರೂರು ತಾಲೂಕು ಉತ್ತಮ ಫಲಿತಾಂಶ ಪಡೆಯುವಂತಾಗಲು ಶಿಕ್ಷಕರು ಗಣಿತ ವಿಷಯದ ಜ್ಞಾನವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಬೇಕು ಎಂದು ಕರೆ ನೀಡಿದರು.
ಗಣಿತ ಶಿಕ್ಷಕರ ವೇದಿಕೆಯ ಕಾರ್ಯದರ್ಶಿ ಎಂ.ಎಂ. ಕೆರೂರ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಕೆ.ಎಂ. ಸುಕುಮಾರ, ರಾಜು ಬೆಟ್ಟಳ್ಳೇರ ವಿಷಯ ಕುರಿತು ತರಬೇತಿ ನೀಡಿದರು. ಅತಿಥಿಗಳಾಗಿ ವೇದಿಕೆಯ ಅಧ್ಯಕ್ಷ ಚಾಮರಾಜ, ಶಿಕ್ಷಣ ಸಂಯೋಜಕ ವಿ.ಸಿ.ಕೋರಿ, ಎಂ.ಎಂ. ಮತ್ತೂರ, ಗಣಿತ ಶಿಕ್ಷಕ ಎಸ್.ಎಸ್.ಚಪ್ಪರದಳ್ಳಿ, ವಿ.ಎಚ್. ಮುದಿಗೌಡ್ರ, ಸುಧಾ ಬಣಕಾರ ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.