ಹಾವೇರಿ: ಸಹಿ ಸಂಗ್ರಹ ಚಳವಳಿ
ಹಾವೇರಿ: ಮಾತೃ ಭಾಷೆಯಲ್ಲಿ ಶಿಕ್ಷಣ ಮಾಧ್ಯಮಕ್ಕಾಗಿ ಅಗತ್ಯ ಕಾನೂನುಗಳನ್ನು ರೂಪಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಎಸ್ಎಫ್ಐ ಶುಕ್ರವಾರ ನಗರದಲ್ಲಿ ಸಹಿ ಸಂಗ್ರಹ ಚಳವಳಿ ನಡೆಸಿತು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದ ಎಸ್ಎಫ್ಐ ಕಾರ್ಯಕರ್ತರು ಬಳಿಕ ಸಹಿ ಸಂಗ್ರಹ ನಡೆಸಿದರು. ನಂತರ ಎಸ್ಎಫ್ಐ ಮುಖಂಡರು ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಜಗತ್ತಿನಾದ್ಯಂತ ಇಂದು ವಿಶ್ವ ಮಾತೃಭಾಷಾ ದಿನ ಆಚರಿಸಲಾಗುತ್ತಿದೆ. ಮಾತೃಭಾಷೆಯ ಮೂಲಕ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಸಾಧ್ಯ. ಶಿಕ್ಷಣದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು
ಮಾತೃಭಾಷಾ ಶಿಕ್ಷಣ ಅಗತ್ಯವಾಗಿದ್ದು, ಇದನ್ನು ಸರ್ಕಾರ ಜಾರಿ ಮಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಎಂ. ಸುಭಾಸ, ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ, ತಾಲೂಕು ಅಧ್ಯಕ್ಷ ಪ್ರಸನ್ನ ಹಿರೇಮಠ, ಇಮಾಮ್ ನದಾಫ, ಅಮಿತ್, ನವೀನ ದೊಡ್ಡನ್ನವರ, ಶಾಂತಾ ನಾಡಿಗೇರ, ವಿಜಯ ಶಂಕ್ರಪ್ಪನವರ, ಅರುಣ ಕೆಂಚನಗೌಡ್ರ, ನಾಗರಾಜ, ಮೇಘ ಬಳಿಗಾರ, ವಿದ್ಯಾ ದೊಡ್ಮನಿ, ಸುಧಾ ದೊಡ್ಮನಿ, ಪೂರ್ಣಿಮಾ, ಜ್ಯೋತಿ, ಮಂಜುನಾಥ ಉಪ್ಪಾರ, ಶಂಭುಲಿಂಗಯ್ಯ, ಸುರೇಶ ದೊಡ್ಮನಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

