ಹಾವೇರಿ

ಯುವಕರ ಸಬಲೀಕರಣವೇ ರಾಷ್ಟ್ರೀಯ ಯುವ ನೀತಿ ಧ್ಯೇಯ: ಜುಂಜಣ್ಣ

Published On :

ಹಾವೇರಿ: ದೇಶದ ಯುವಜನತೆ ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಸಾಧಿಸಲು ಮತ್ತು ಅವುಗಳ ಮೂಲಕ ಭಾರತವನ್ನು ಇತರೇ ದೇಶಗಳ ಸಮುದಾಯದಲ್ಲಿ ಅದರ ಸೂಕ್ತ ಸ್ಥಾನವನ್ನು ಪಡೆಯಲು ಸಕ್ರಿಯಗೊಳಿಸಲು ಯುವಕರನ್ನು ಸಬಲಗೊಳಿಸುವುದೇ ರಾಷ್ಟ್ರೀಯ ಯುವ ನೀತಿ-2014ರ ಧ್ಯೇಯವಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಎಂ. ಜುಂಜಣ್ಣ ಹೇಳಿದರು.
ನೆಹರು ಯುವ ಕೇಂದ್ರದ ವತಿಯಿಂದ ನಗರದ ಜಿ.ಎಚ್ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯುವ ನೀತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಜಿ.ಎಚ್. ಕಾಲೇಜಿನ ಉಪಪ್ರಾಚಾರ್ಯ ಎನ್.ವಿ. ಕಂಬಾಳಿಮಠ ಮಾತನಾಡಿ, ಯುವ ಜನತೆ ಜೀವನದಲ್ಲಿ ಉನ್ನತ ಗುರಿ ಇಟ್ಟುಕೊಂಡು ಅದನ್ನು ಸಾಧಿಸುವ ಛಲ ಹೊಂದಿರಬೇಕು. ಜೀವನದಲ್ಲಿ ಯಶಸ್ಸು ಕಾಣಲು ಸತತ ಪ್ರಯತ್ನ ಅಗತ್ಯ. ಸಾಧನೆಗೆ ಅಸಾಧ್ಯವಾದುದು ಯಾವುದು ಇಲ್ಲ. ಆದ್ದರಿಂದ ಸಮಯ ವ್ಯರ್ಥ ಮಾಡದೇ ಉತ್ತಮ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದರು. ನೆಹರು ಯುವ ಕೇಂದ್ರದ ಯುವ ಸಮನ್ವಯಾಧಿಕಾರಿ ಎಸ್.ಯು. ಜಮಾದಾರ ಪ್ರಾಸ್ತಾವಿಕ ಮಾತನಾಡಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಎಂ.ಎಚ್. ಹೆಬ್ಬಾಳ್, ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಎಸ್.ಎಚ್. ಮಜೀದ್ ಇದ್ದರು. ರಮೇಶ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.