ಹಾವೇರಿ

ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬದ್ಧ: ಬಡಳ್ಳಿ

Published On :

ಹಿರೇಕೆರೂರು: ಐತಿಹಾಸಿಕ ಹಿರೇಕೆರೂರು ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ದೇವಸ್ಥಾನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲು ಯುವಕರು ಬದ್ಧರಾಗಿದ್ದಾರೆ ಎಂದು ಪಪಂ ಉಪಾಧ್ಯಕ್ಷ ಮಹೇದ್ರ ಬಡಳ್ಳಿ ತಿಳಿಸಿದರು.
ಭಾನುವಾರ ಪಟ್ಟಣದ ಶ್ರೀದುರ್ಗಾದೇವಿ ದೇವಸ್ಥಾನದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಿರೇಕೆರೂರು ಕೆರೆಯ ಮೇಲಿರುವ ಶ್ರೀ ದುರ್ಗಾದೇವಿ ದೇವಸ್ಥಾನ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಅಲ್ಲದೆ ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯದ ಭಕ್ತರು ಈ ದೇವಸ್ಥಾನಕ್ಕೆ ಬರುತ್ತಾರೆ. ಆದರೆ, ಇಲ್ಲಿ ಬಂದ ಭಕ್ತರ ಸಮೂಹಕ್ಕೆ ಮೂಲಭೂತ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಆದ್ದರಿಂದ ವಸತಿಗೃಹ, ಶೌಚಾಲಯ, ಮತ್ತು ಸ್ನಾನ ಗೃಹ ಮತ್ತಿತರ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಗ್ರಾಮೀಣ ಭಾಗದ ಭಕ್ತರ ಸಮೂಹ ಮತ್ತು ಪಟ್ಟಣದ ಭಕ್ತರೆಲ್ಲರೂ ಸೇರಿ ದೇವಸ್ಥಾನಕ್ಕೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈಗಿರುವ ಟ್ರಸ್ಟನೊಂದಿಗೆ ನೂತನ ಸಮಿತಿಯನ್ನು ರಚಿಸಿಕೊಂಡು ಕಾರ್ಯಗಳನ್ನು ಪೂರೈಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದುರ್ಗಾದೇವಿ ಟ್ರಸ್ಟ್ ಅಧ್ಯಕ್ಷ ಜಗದೀಶ ತಂಬಾಕದ, ಲಿಂಗರಾಜ ನಾಯ್ಕ, ರಾಮು ಮುರ್ಡೇಶ್ವರ, ಚಂದ್ರು ಮಾರವಳ್ಳಿ, ಶಿವಯೋಗಿ ಪಾಟೀಲ, ಸುರೇಶ ಮಡಿವಾಳರ, ಸುರೇಶ ವೈಶ್ಯರ, ಗುರುರಾಜ ನಾಡಿಗೇರ, ಮಂಜುನಾಥ ಸಾಲಿ, ಉಮೇಶ ಹಳಕಟ್ಟಿ, ರಾಜು ಕರಡಿ, ರವಿ ಉಣಕಲ್, ಬಸವರಾಜ ಕಟ್ಟಿಮನಿ, ವಾಗೇಶ ವಾಲಿ, ಬೀರೇಶ ಹಾರ್ನಳ್ಳಿ, ಜಗದೀಶ ಮುರ್ಡೇಶ್ವರ, ಸತೀಶ ನಾಡಿಗೇರ, ಸುಭಾಸ ಹಂಪಾಳಿ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.