ಆರ್ಥಿಕ ಸಬಲೀಕರಣಕ್ಕೆ ಕೌಶಲ್ಯ ತರಬೇತಿ ಸಹಾಯಕ: ಮಾಳಗೇರ
ಕನ್ನಡಪ್ರಭ ವಾರ್ತೆ, ಹಾವೇರಿ, ಫೆ. 23
ಲಿಂಗತ್ವ ಅಲ್ಪ ಸಂಖ್ಯಾತರು ತಮಗೆ ಬೇಕಾದ ವೃತ್ತಿ ಕೌಶಲ ಅಭಿವೃದ್ಧಿ ತರಬೇತಿ ಪಡೆದು ಆರ್ಥಿಕವಾಗಿ ಸಬಲೀಕರಣ ಹೊಂದಿ ಸಮಾಜದ ಮುಖ್ಯ ವಾಹಿನಿಗೆ ಸೇರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಂ.ಎನ್. ಮಾಳಗೇರ ಹೇಳಿದರು.
ನಗರದ ಸಂಜೀವಿನಿ ಲಿಂಗತ್ವ ಅಲ್ಪ ಸಂಖ್ಯಾತರ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾ ಆಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾವೇರಿ ಮತ್ತು ಸ್ಪೀಡ್ ಸಂಸ್ಥೆ ಆಶ್ರಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಏರ್ಪಡಿದ್ದ ವೃತ್ತಿ ಕೌಶಲ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂತಹ ತರಬೇತಿಗಳನ್ನು ಹೆಚ್ಚಿನ ಆಸಕ್ತಿ ವಹಿಸಿ ಕೌಶಲ್ಯಗಳನ್ನು ಅಭಿವೃದ್ದಿ ಪಡಿಸಿದಲ್ಲಿ ಆರ್ಥಿಕ ಸ್ವಾವಲಂಬನೆ ಸಾಧಿಸುವ ಮೂಲಕ ಗೌರವ ಮತ್ತು ಘನತೆಯ ಬದುಕು ನಿಮ್ಮದಾಗಿಸಿಕೊಳ್ಳಬಹುದು. ನೀವೆಲ್ಲರು ಭಿಕ್ಷಾಟನೆ ಮತ್ತು ಲೈಂಗಿಕ ವೃತ್ತಿ ತೊರೆದು ಸರ್ಕಾರದ ಇಂತಹ ಯೋಜನೆಯನ್ನು ಪಡೆದುಕೊಂಡು ತಮ್ಮ ಜೀವನ ಯಶಸ್ವಿಗೊಳಿಸಿಕೊಳ್ಳಬೇಕೆಂದು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೇಮ್ ಮಾತನಾಡಿ, ಹಿಂಸೆ ಮತ್ತು ದೌರ್ಜನ್ಯವನ್ನು ಹಾಗೂ ಕಳಂಕ ತಾರತಮ್ಯ ಮುಕ್ತರಾಗಿ ಬದುಕಬೇಕಾದರೆ ಇಂತಹ ವೃತ್ತಿ ಕೌಶಲ್ಯ ತರಬೇತಿಯನ್ನು ಸಮುದಾಯವು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮ ನಿರೂಪಣಾಧಿಕಾರಿ ಪಿ.ಎಚ್. ವಿಜಯ ಕುಮಾರ, ಡಿ.ಎಚ್. ಲಲಿತಾ ಇನ್ನಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

