ಹಾನಗಲ್ಲ: ಕೃಷಿ ಮಹೋತ್ಸವ 26ರಂದು
ಹಾನಗಲ್ಲ: ಸಾವಯವ ಕೃಷಿ, ಲಾಭದಾಯಕ ಹೈನುಗಾರಿಕೆ, ಕೃಷಿ ಜಮೀನಿನ ಮಣ್ಣು ನೀರಿನ ಸದ್ಬಳಕೆ, ಮಹಿಳಾ ಸ್ವಾವಲಂಬನೆ ಕುರಿತ ವಿಚಾರ ಸಂಕಿರಣ ಹಾಗೂ ಕೃಷಿ ಮಹೋತ್ಸವ ಫೆ. 26ರಂದು ಹಾನಗಲ್ಲ ತಾಲೂಕಿನ ಹೇರೂರು-ಕಲಕೇರಿ ಗ್ರಾಮದಲ್ಲಿ ನಡೆಯಲಿದೆ.
ಬುಧವಾರ ಬೆಳಗ್ಗೆ 10 ಗಂಟೆಗೆ ತಾಲೂಕಿನ ಕಲಕೇರಿಯ ಬಸವೇಶ್ವರ ಪ್ರೌಢಶಾಲೆಯ ಆವರಣದಲ್ಲಿ ನಡೆಯುವ ಕೃಷಿ ಉತ್ಸವವನ್ನು ಸಕ್ಕರೆ ಹಾಗೂ ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಉದ್ಘಾಟಿಸುವರು. ಶಾಸಕ ಮನೋಹರ ತಹಶೀಲ್ದಾರ ಅಧ್ಯಕ್ಷತೆ ವಹಿಸುವರು. ಹೇರೂರಿನ ಗುಬ್ಬಿ ನಂಜುಂಡ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯವಹಿಸುವರು. ಸಂಸದ ಶಿವಕುಮಾರ ಉದಾಸಿ ವಿಚಾರ ಗೋಷ್ಠಿ ಉದ್ಘಾಟಿಸುವರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮಾ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು. ನೆಹರು ಯುವ ಕೇಂದ್ರದ ಮಹಾನಿರ್ದೇಶಕ ಸಲೀಂ ಅಹಮ್ಮದ್ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸುವರು. ಜಾನುವಾರು ಪ್ರದರ್ಶನವನ್ನು ಧಾರವಾಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ಉದ್ಘಾಟಿಸುವರು.
ಅತಿಥಿಗಳಾಗಿ ತಾಪಂ ಅಧ್ಯಕ್ಷ ಮಲ್ಲನಗೌಡ ವೀರನಗೌಡ್ರ, ಉಪಾಧ್ಯಕ್ಷೆ ಅನಿತಾ ಶಿವೂರ, ಗ್ರಾಪಂ ಅಧ್ಯಕ್ಷೆ ವಿನೋದಾ ಬಡಿಗೇರ, ಜಿಪಂ ಸದಸ್ಯರಾದ ಗೀತಾ ಅಂಕಸಖಾನಿ, ಬಸವರಾಜ ಹಾದಿಮನಿ, ಪದ್ಮನಾಭ ಕುಂದಾಪುರ, ಅಬಿದಾಭಿ ನದಾಫ, ಕಸ್ತೂರೆವ್ವ ವಡ್ಡರ, ತಾಪಂ ಸದಸ್ಯ ಮಧು ಪಾಣಿಗಟ್ಟಿ, ಚಂದ್ರಣ್ಣ ಕಳ್ಳಿ, ಕಬ್ಬು ಬೆಳೆಗಾರರ ಅಧ್ಯಕ್ಷ ರಾಜಶೇಖರ ಬೆಟಗೇರಿ, ಜಂಟಿ ಕೃಷಿ ನಿರ್ದೇಶಕ ಡಾ.ಗಣೇಶ ನಾಯಕ ಪಾಲ್ಗೊಳ್ಳುವರು.
ನಂತರ ನಡೆಯುವ ಲಾಭದಾಯಕ ಹೈನುಗಾರಿಕೆ ಮತ್ತು ಕರುಗಳ ಪಾಲನೆ, ಗ್ರಾಮೀಣ ಭಾಗದಲ್ಲಿ ಮಹಿಳಾ ಸ್ವಾವಲಂಬನೆ ಹಾಗೂ ಸುಖಿ ಸಂಸಾರ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ, ಸಾವಯವ ಕೃಷಿ, ಮಣ್ಣು ನೀರಿನ ಸದ್ಬಳಕೆ ವಿಷಯಗಳ ಕುರಿತು ವಿಚಾರ ಗೋಷ್ಠಿಗಳು ನಡೆಯಲಿವೆ. ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ಅಕ್ಕಿಆಲೂರು ವಿರಕ್ತಮಠದ ಶಿವಬಸವ ಸ್ವಾಮಿಗಳು ವಹಿಸುವರು. ಅಧ್ಯಕ್ಷತೆಯನ್ನು ಕೃಷಿ ಮಹೋತ್ಸವ ಸಮಿತಿ ಅಧ್ಯಕ್ಷರೂ ಆದ ಜಿಪಂ ಸದಸ್ಯ ಮಹದೇವಪ್ಪ ಬಾಗಸರ ವಹಿಸುವರು. ಜಿಲ್ಲಾ ನಿರ್ದೇಶಕ ವಸಂತ ಸಾಲಿಯಾನ ಮುಂತಾದವರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

