ಜಿಲ್ಲಾಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಹಾವೇರಿ: ಇಲ್ಲಿಯ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಖಂಡಿಸಿ ಹಾಗೂ ಬಡವರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಆಗ್ರಹಿಸಿ ಜನಾರೋಗ್ಯ ಆಂದೋಲನ ಜಿಲ್ಲಾ ಸಮಿತಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ರ್ಯಾಲಿ ನಡೆಸಿ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಜನಾರೋಗ್ಯ ಆಂದೋಲನ ಜಿಲ್ಲಾ ಸಮಿತಿ, ರೈತ ಕೂಟಗಳ, ಬ್ಯಾಡಗಿ ಶ್ರಮಶಕ್ತಿ ಕಟ್ಟಡ ಕಾರ್ಮಿಕರ ಯೂನಿಯನ್, ಬಿಡಿ ಕಾರ್ಮಿಕರ ಯೂನಿಯನ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜನಾರೋಗ್ಯ ಆಂದೋಲನ ಉತ್ತರ ಕರ್ನಾಟಕ ವೇದಿಕೆ ಸಂಚಾಲಕ ಕರಿಬಸಪ್ಪ ಎಂ., ಜಿಲ್ಲಾಸ್ಪತ್ರೆ, ಗುತ್ತಲ ಹಾಗೂ ಬ್ಯಾಡಗಿ ಸಮುದಾಯ ಆರೋಗ್ಯ ಕೇಂದ್ರ, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಔಷಧಿ ನೀಡಬೇಕು. ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ಆಸ್ಪತ್ರೆಯಲ್ಲೇ ನಡೆಸಬೇಕು. ಅಸಂಘಟಿತ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ಬಡವರಿಗೆ ಉಚಿತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹಣ ವಸೂಲಿ ಮಾಡಲಾಗುತ್ತಿದ್ದು, ಹೊರಗಡೆಯಿಂದ ಔಷಧಿ ತರುವಂತೆ ಸೂಚಿಸಲಾಗುತ್ತಿದೆ. ಇದು ನಿಲ್ಲಬೇಕು. ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳನ್ನು ಕುರ್ಚಿ ಮೇಲೆ ಕೂರಿಸಿ ಇಂಜೆಕ್ಷನ್ ಮಾಡುತ್ತಿದ್ದು, ಈ ಪದ್ಧತಿ ಬಿಡಬೇಕು. ಗ್ರಾಮೀಣ ಭಾಗಗಳಿಂದ ಹೆರಿಗೆಗೆ ಬಂದವರನ್ನು ನೆಪ ಹೇಳಿ ದಾವಣಗೆರೆ, ಹುಬ್ಬಳ್ಳಿ ಆಸ್ಪತ್ರೆಗೆ ಕಳುಹಿಸದೆ ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ನೀಡಬೇಕು. ಹಾವೇರಿ ಜಿಲ್ಲಾಸ್ಪತ್ರೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು. ಖಾಸಗಿ ಮೆಡಿಕಲ್ ಕಾಲೇಜಿಗೆ ವಹಿಸದೇ ಜಿಲ್ಲಾಡಳಿತದಿಂದಲೇ ನಿರ್ವಹಿಸಬೇಕು. ಸಾರ್ವಜನಿಕರು ಆಸ್ಪತ್ರೆಯಲ್ಲಿ ಎಲೆ ಅಡಿಕೆ ಉಗುಳುವುದನ್ನು ತಡೆಯಲು ಅಗತ್ಯ ಜೌಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ತಾಲೂಕಿನ ನಾಗೇಂದ್ರನಮಟ್ಟಿ ಆರೋಗ್ಯ ಕೇಂದ್ರಕ್ಕೆ ತಕ್ಷಣ ವೈದ್ಯರ ನೇಮಕ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಈ ಕುರಿತ ಮನವಿಯನ್ನು ಜಿಲ್ಲಾ ಸರ್ಜನ್ ಡಾ. ಬಸವರಾಜ ಅಂಗಡಿ ಅವರಿಗೆ ಸಲ್ಲಿಸಿದರು. ನಾಗಣ್ಣ ದೊಡ್ಡಮನಿ, ರಮೇಶ ಗೋಡೇರ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

