ಜಾನಪದದಿಂದ ನಾಡು ಶ್ರೀಮಂತ
ಶಿಗ್ಗಾಂವಿ: ಭಾರತ ಭವ್ಯ ಇತಿಹಾಸ ಮತ್ತು ಪರಂಪರೆ ಹೊಂದಿದೆ. ಅರಸು ಮನೆತನಗಳು ಸಹ ಪ್ರಾಚೀನ ಕಾಲದಿಂದ ಲಲಿತ ಕಲೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿವೆ. ಅನಿವಾರ್ಯತೆ ಮಧ್ಯೆ ಬೆಳೆದ ಜಾನಪದ ಸಾಹಿತ್ಯ ಮತ್ತು ಕಲೆ ಈ ನಾಡನ್ನು ಶ್ರೀಮಂತಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಜಾನಪದ ಕಲಾವಿದ ಹಾಲೇಶ ಗುಂಗೇರಿ ಹೇಳಿದರು.
ಅವರು ಪಟ್ಟಣದ ಎಸ್ಆರ್ಜೆವಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಜಾನಪದ ಪರಂಪರೆ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಜಾನಪದ ಗೀತೆಗಳನ್ನು ಹಾಡಿದರು. ಅವರೊಂದಿಗೆ ಬಸವರಾಜ ಕರಡಿ ಸಾಥ್ ನೀಡಿದರು. ಇದೇ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದೆ ಸಾವಕ್ಕಾ ಓಲಿಕಾರ, ಭಾರತಿ ಸೋಬಾನ ಗೀತೆಗಳನ್ನು ಹಾಡಿದರು.
ತಾಲೂಕು ಪರಂಪರಾ ಕೂಟದ ಸಂಚಾಲಕರಾದ ಪ್ರೊ. ಪಿ.ಸಿ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಸಿ.ಎಚ್. ತಾವರಗೊಂದಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಡಾ. ಡಿ.ಎ. ಗೊಬ್ಬರಗುಂಪಿ, ಡಾ. ಬಿ.ಎಸ್. ನರೇಗಲ್ ಉಪಸ್ಥಿತರಿದ್ದರು.
ಎಂ.ಜಿ ದೊಡ್ಡಮನಿ, ಎಂ.ಬಿ. ಬಿಕ್ಕಣ್ಣವರ ಸ್ವಾಗತಿಸಿದರು. ಎನ್.ಎಫ್. ದುಂಡಪ್ಪನವರ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

