ಹಾವೇರಿ

ಖಾಲಿ ಹುದ್ದೆಗಳ ಭರ್ತಿಗೆ ಒಪ್ಪಿಗೆ: ಸಂಕನೂರ ಸ್ವಾಗತ

Published On :

ಬ್ಯಾಡಗಿ: ರಾಜ್ಯದ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ನಿಧನ, ರಾಜಿನಾಮೆ ಮತ್ತು ಬಡ್ತಿ ಮೂಲಕ ತೆರವಾದ ಒಟ್ಟು 291 ಹುದ್ದೆಗಳನ್ನು ತುಂಬಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದನ್ನು ಪದವಿಪೂರ್ವ ನೌಕರರ ಸಂಘದ ಗೌರವಾಧ್ಯಕ್ಷ ಪ್ರಾ. ಎಸ್.ವಿ. ಸಂಕನೂರ ಸ್ವಾಗತಿಸಿದ್ದಾರೆ. ಈ ಕುರಿತು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಸಂಖ್ಯೆ ಇಡಿ 159 ಟಿಪಿಯು 2012 ಆದೇಶ ಹೊರಡಿಸಿದ್ದು, ಸಂಬಂಧಪಟ್ಟ ಆಡಳಿತ ಮಂಡಳಿಯನ್ನೇ ನೇಮಕಾತಿ ಪ್ರಾಧಿಕಾರವೆಂದು ಪರಿಗಣಿಸಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿರ್ದೇಶಿಸಿಲಾಗಿದೆ. ಆದೇಶದನ್ವಯ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಜ. 1, 2013ರಲ್ಲಿ ತೆರವಾಗಿರುವ ಉಪನ್ಯಾಸಕರ ಹುದ್ದೆಗಳನ್ನು ತುಂಬಿಕೊಳ್ಳಲು ಅನುಕೂಲವಾಗಲಿದೆ ಎಂದರು. ಇತ್ತೀಚೆಗೆ 371ಜೆ ಅಡಿಯಲ್ಲಿ ಹೈ-ಕಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದು, ಸರ್ಕಾರ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ನಿಯಮಾವಳಿಗಳನ್ನು ರೂಪಿಸಬೇಕಾಗಿದೆ. ಸಂಬಂಧಪಟ್ಟ ಆಡಳಿತ ಮಂಡಳಿಗೆ ಖಾಲಿ ಹುದ್ದೆ ತುಂಬಿಕೊಳ್ಳಲು ಆದೇಶ ಹೊರಡಿಸುವಲ್ಲಿ ವಿಳಂಬವಾಗಲಿದೆ ಎಂದರು. ಕಾರ್ಯಾಧ್ಯಕ್ಷ ಪ್ರೊ. ಲಿಂಗಯ್ಯ ಹಿರೇಮಠ ಮಾತನಾಡಿ, ಆರ್ಥಿಕ ಮಿತವ್ಯಯ (ಎಕಾನಮಿ ಬ್ಯಾನ್)ಮುಂದಿಟ್ಟುಕೊಂಡು 2006ರ ಈಚೆಗೆ ಖಾಸಗಿ ಪ್ರೌಢಶಾಲೆಗಳಲ್ಲಿ ನಿವೃತ್ತಿ, ನಿಧನ, ರಾಜಿನಾಮೆ ಮತ್ತು ಬಡ್ತಿ ಮೂಲಕ ತೆರವಾದ ಹುದ್ದೆಗಳನ್ನು ತುಂಬಲು ಸರ್ಕಾರ ಅನುಮತಿ ನೀಡಿಲ್ಲ. ಇದರಿಂದ ಸಿಇಟಿ ಪರೀಕ್ಷೆ ವಂಚಿತ ಸಾವಿರಾರು ಪದವೀಧರರು ನಿರುದ್ಯೋಗಿಗಳಾಗುತ್ತಿದ್ದಾರೆ. ಅಲ್ಲದೆ ವಯೋವುತಿ ಮೀರುತ್ತಿರುವ ಕೆಲವರು ಉದ್ಯೋಗದಿಂದ ವಂಚಿತರಾಗುತ್ತಿದ್ದು, ಖಾಲಿಯಿರುವ ಹುದ್ದೆಗಳಿಗೆ ಬೇರೊಬ್ಬರನ್ನು ನಿಯೋಜನೆ ಮಾಡದಂತೆ ಮನವಿ ಮಾಡಿದ್ದಾರೆ.
ರಾಣಿಬೆನ್ನೂರು ಸರ್ಕಾರಿ ಕಾಲೇಜಿಗೆ ಆವರಣ ಗೋಡೆ: ಮಣೇಗಾರ ಭರವಸೆ
ರಾಣಿಬೆನ್ನೂರು: ಇಲ್ಲಿನ ಮಾರುತಿ ನಗರದಲ್ಲಿರುವ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿಗೆ ಶೀಘ್ರದಲ್ಲೇ ಕಾಂಪೌಂಡ್ ನಿರ್ಮಿಸಿ, ಇತರ ಸೌಲಭ್ಯಗಳನ್ನೂ ಕಲ್ಪಿಸುವುದಾಗಿ ನಗರಸಭೆ ಪ್ರಭಾರಿ ಅಧ್ಯಕ್ಷ ಶಿವಪ್ಪ ಮಣೆಗಾರ ಹೇಳಿದ್ದಾರೆ. ಕಾಲೇಜಿನಲ್ಲಿ ಸ್ಥಳಾವಕಾಶದ ಕೊರತೆ ಇದೆ. ಕಾಂಪೌಂಡ್ ಇಲ್ಲದೆ ಕಿಡಿಗೇಡಿಗಳು ಕಿಟಕಿ ಗಾಜುಗಳನ್ನು ಒಡೆದಿದ್ದಾರೆ. ವಿದ್ಯಾರ್ಥಿನಿಯರಿಗೂ ಕಿರುಕುಳ ನೀಡುತ್ತಿದ್ದಾರೆ. ಆವರಣದಲ್ಲಿ ಸ್ವಚ್ಛತೆಯ ಸಮಸ್ಯೆ ಇದೆ ಎಂಬ ಕುರಿತು ಕನ್ನಡಪ್ರಭ ಡಿ. 30ರಂದು ವಿಶೇಷ ವರದಿ (ಸರ್ಕಾರಿ ಕಾಲೇಜು ಸಮಸ್ಯೆ ಸಾವಿರ) ಪ್ರಕಟಿಸಿತ್ತು. ಇದನ್ನು ಗಮನಿಸಿದ ನಗರಸಭೆ, ತುರ್ತು ಕ್ರಮಕ್ಕೆ ಮುಂದಾಗಿದೆ. ಕಾಲೇಜಿಗೆ ಆವರಣ ಗೋಡೆ ನಿರ್ಮಿಸಲು ನಗರಸಭೆ ಪೌರಾಯುಕ್ತರು ಹಾಗೂ ಲೋಕೋಪಯೋಗಿ ಅಧಿಕಾರಿಗಳಿಂದ ಮಾಹಿತಿ ತರಿಸಿಕೊಂಡು, ಶೀಘ್ರ ಕ್ರಮ ಕೈಗೊಳ್ಳುವುದಾಗಿ ನಗರಸಭೆ ಉಪಾಧ್ಯಕ್ಷರೂ ಆಗಿರುವ ಮಣೆಗಾರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.