ಹಾವೇರಿ

ಬೆಳೆವಿಮೆ: ರೈತರು ಸೂಕ್ತ ಮಾಹಿತಿ ನೀಡಿ

Published On :

ಶಿಗ್ಗಾಂವಿ: ಗ್ರಾಮ ಲೆಕ್ಕಿಗರು ಬೆಳೆ ವಿವರ ದಾಖಲು ಮಾಡುವಾಗ ರೈತರು ಸರಿಯಾದ ಮಾಹಿತಿ ನೀಡಿದರೆ ಹಾಗೂ ಬೆಳೆ ಕಟಾವು ಪ್ರಯೋಗ ಕೈಗೊಳ್ಳುವಾಗ ಸಹಕರಿಸಿದರೆ ನಿಖರ ಅಂಕಿ-ಅಂಶಗಳನ್ನು ಪಡೆಯಬಹುದು ಎಂದು ತಹಸೀಲ್ದಾರ್ ಎಸ್.ಎ. ಚೌಗುಲೆ ಹೇಳಿದರು.
ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಸಾಂಖ್ಯಿಕ ಅಭಿವೃದ್ಧಿ ಸಂಸ್ಥೆ, ಬೆಂಗಳೂರು ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಜರುಗಿದ ಪಹಣಿಯಲ್ಲಿ ಬೆಳೆ ವಿವರ ದಾಖಲಾತಿ ಮತ್ತು ಬೆಳೆ ಕಟಾವು ಪ್ರಯೋಗಗಳ ಮಹತ್ವಗಳ ಬಗ್ಗೆ ವಿಶೇಷ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎಸ್.ಎಚ್. ಪಾಟೀಲ ಕಾರ್ಯಾಗಾರ ಉದ್ಘಾಟಿಸಿದರು. ಬೆಳೆ ವಿಮೆ, ಕೃಷಿ ಭೂಮಿಗೆ ಬೇಕಾದ ಪರಿಹಾರ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಯೋಜನೆ ಪಡೆಯಲು, ರಾಜ್ಯ ಹಾಗೂ ಕೇಂದ್ರ ಆದಾಯಗಳ ಅಂದಾಜುಗಳನ್ನು ತಯಾರಿಸಲು, ಅಭಿವೃದ್ದಿ ಯೋಜನೆಗಳನ್ನು ತಯಾರಿಸಲು ಇದರಿಂದ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಸಹಾಯಕ ನಿರ್ದೇಶಕ ಎಚ್.ವೈ. ಮೀಶಿ, ತರಬೇತಿದಾರ ಜೆ.ಆರ್. ಪಾಟೀಲ ಇದ್ದರು. ಎಸ್.ಎನ್. ಸಣ್ಣಕ್ಕಿ ಸ್ವಾಗತಿಸಿದರು. ಶಂಕರ ಪವಾರ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.