ಹಾವೇರಿ

ಕುಮದ್ವತಿ ಸೇತುವೆಗೆ ನಾಳೆ ಸಿಎಂ ಶಂಕುಸ್ಥಾಪನೆ

Published On :

ಹಾವೇರಿ: ಜಿಲ್ಲಾಡಳಿತ, ಲೋಕೋಪಯೋಗಿ ಬಂದರು ಹಾಗೂ ಒಳನಾಡು ಜಲಸಾರಿಗೆ ವಿಭಾಗದಿಂದ ನಬಾರ್ಡ್ ಆರ್‌ಐಡಿಎಫ್ 18ರ ಯೋಜನೆಯಡಿ ಹಿರೇಕೆರೂರು ತಾಲೂಕಿನ ರಟ್ಟಿಹಳ್ಳಿ-ಮಳಗಿ-ಕಣವಿ ಸಿದ್ದಗೇರಿ ರಸ್ತೆಯ ಕಿ.ಮೀ. 6ರಲ್ಲಿ ಕುಮದ್ವತಿ ನದಿಗೆ ಅಡ್ಡಲಾಗಿ ನಿರ್ಮಿಸುವ ಸೇತುವೆ ಕಾಮಗಾರಿ ಹಾಗೂ 13ನೇ ಹಣಕಾಸು ಯೋಜನೆ ಅಡಿಯಲ್ಲಿ ಹಾವೇರಿ-ಸಾಗರ ರಾಜ್ಯ ಹೆದ್ದಾರಿ ಪಟ್ಟಣ ಪರಿಮಿತಿಯಲ್ಲಿ ಸುಧಾರಣೆ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭ ಜ. 4ರಂದು ಬೆಳಗ್ಗೆ 11 ಗಂಟೆಗೆ ಬಸರಿಹಳ್ಳಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ, ಲೋಕೋಪಯೋಗಿ ಸಚಿವ ಡಾ೤ ಎಚ್.ಸಿ. ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್, ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ, ಸಂಸದರಾದ ಶಿವಕುಮಾರ ಉದಾಸಿ, ಪ್ರಹ್ಲಾದ ಜೋಶಿ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಆಗಮಿಸುವರೆಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ್ ತಿಳಿಸಿದ್ದಾರೆ.
ನಾಳೆ ಹೆಸ್ಕಾಂ ಸಭೆ
ಹಾವೇರಿ: ಜಿಲ್ಲೆಯ ಹೆಸ್ಕಾಂ ಗ್ರಾಹಕರ ಕುಂದು-ಕೊರತೆ ಆಲಿಕೆ ಸಭೆಯನ್ನು ಜ. 4ರಂದು ಸಂಜೆ 4 ಗಂಟೆಗೆ ಹೆಸ್ಕಾಂ ಹಾವೇರಿ ವೃತ್ತದ ಅಧೀಕ್ಷಕ ಅಭಿಯಂತರ ಕಚೇರಿಯಲ್ಲಿ ಏರ್ಪಡಿಸಲಾಗಿದೆ ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿಯ ಅಧೀಕ್ಷಕ ಎಂಜಿನೀಯರ್ ಎನ್.ಬಿ. ಕಟಕೋಳ ವಿನಂತಿಸಿದ್ದಾರೆ.
6ರಂದಎ ಎಸ್ಸಿ, ಎಸ್ಟಿ ಕಲ್ಯಾಣ ಸಮಿತಿ ಪ್ರವಾಸ
ಹಾವೇರಿ: ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಜ. 6ರಂದು ಜಿಲ್ಲೆಗೆ ಭೇಟಿ ನೀಡಿ, ಸಂಜೆ 4.30ಕ್ಕೆ ಜಿಪಂ ಸಭಾಂಗಣದಲ್ಲಿ ಸಭೆ ನಡೆಸಲಿದೆ. ಬಳಿಕ ಅನುಸೂಚಿತ ಜಾತಿ ಮತ್ತು ಪಂಗಡದವರ ಸಮಸ್ಯೆ ಕುರಿತು ಅಹವಾಲು, ಮನವಿ ಸ್ವೀಕರಿಸಲಿದೆ. ಸಾರ್ವಜನಿಕರು ಅಹವಾಲು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದ್ದಾರೆ.
ನಿರಂಜನಯ್ಯ ನಿಧನ
ಶಿಗ್ಗಾಂವಿ: ಬನ್ನೂರ ಗ್ರಾಮದ ನಿರಂಜನಯ್ಯ ಬಸವಣ್ಣೆಯ್ಯ ಚಿಕ್ಕಮಠ (86) ಗುರುವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಇದ್ದಾರೆ. ಬಂಕಾಪುರ ಅರಳೆಲೆ ಮಠದ ರೇವಣಶಿದ್ದೇಶ್ವರ ಶಿವಾಚಾರ್ಯರು, ಶಾಸಕ ಬಸವರಾಜ ಬೊಮ್ಮಾಯಿ, ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ಜಂಗಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಹರ ಗ್ರಾಮಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಮಂಜುನಾಥ ಮಣ್ಣಣ್ಣವರ, ತಿಪ್ಪಣ್ಣ ಸಾತಣ್ಣವರ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ. ಪಾಟೀಲ್ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.