ಹಾವೇರಿ

ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರ ಸಭೆ

Published On :

ಹಾವೇರಿ:  ಜಿಲ್ಲಾ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ಮೇಲ್ವಿಚಾರಕರ ಸಭೆ ಜ. 6ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ನೌಕರರ ಭವನದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಪಂ ಗ್ರಂಥಾಲಯಗಳ ಮೇಲ್ವಿಚಾರಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಚಲವಾದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮೇಲ್ವಿಚಾರಕರು ಎದುರಿಸುತ್ತಿರುವ ವೇತನ, ಇತರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಗ್ರಾಪಂ ಮೇಲ್ವಿಚಾರಕರು ಪಾಲ್ಗೊಳ್ಳುವಂತೆ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಪಾಟೀಲ ತಿಳಿಸಿದ್ದಾರೆ.
ಲೈಂಗಿಕ ಶೋಷಣೆ ವಿರುದ್ಧ ಜಾಗೃತಿಗೆ ಮ್ಯಾರಾಥಾನ್
ರಾಣಿಬೆನ್ನೂರು: ಮಹಿಳೆ ಹಾಗೂ ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳದ ವಿರುದ್ಧ ಜಾಗೃತಿ ಮೂಡಿಸಲು ಜ. 4ರಂದು ನಗರದಲ್ಲಿ ಮ್ಯಾರಾಥಾನ್ ಓಟ ನಡೆಯಲಿದೆ ಎಂದು ಓಂ ಪಬ್ಲಿಕ್ ಶಾಲೆಯ ಅಧ್ಯಕ್ಷೆ ರುಕ್ಮಿಣಿ ಸಾವುಕಾರ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣಕ್ಕೆ ವಿಶೇಷ ಕಾನೂನು ಜಾರಿಯಾಗಬೇಕು. ಅತ್ಯಾಚಾರ, ದೌರ್ಜನ್ಯ ಹಾಗೂ ಕಿರುಕುಳದ ವಿರುದ್ಧ ಜಾಗೃತಿ ಮೂಡಬೇಕು. ದೌರ್ಜನ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಅಧಿಕಾರವನ್ನು ತಾಲೂಕು ದಂಡಾಧಿಕಾರಿಗಳಿಗೆ ನೀಡಬೇಕು ಪ್ರತಿ ತಾಲೂಕು ಕೇಂದ್ರದಲ್ಲಿ ಮಹಿಳಾ ಪೊಲೀಸ್ ಠಾಣೆ ಆರಂಭಿಸಬೇಕು. ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಮಹಿಳಾ ಸಹಾಯವಾಣಿ ಕೇಂದ್ರ ಆರಂಭಿಸಬೇಕೆಂದು ಆಗ್ರಹಿಸಿದರು. ಪ್ರಾಂಶುಪಾಲ ಮಂಜುನಾಥ ಎನ್., ಉಪಾಧ್ಯಕ್ಷ ಡಾ೤ ಮನೋಜ ಸಾಹುಕಾರ, ಪ್ರಕಾಶ ತಾವರೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.