ಹಾವೇರಿ

ಸಿದ್ದು ಸ್ವಾಭಿಮಾನಕ್ಕೆ ರಾಹುಲ್ ಕೊಡಲಿಯೇಟು

Published On :

ಹಾವೇರಿ: ಅನಿಲ್ ಲಾಡ್‌ಗಿಂತ ಹೆಚ್ಚು ಕಳಂಕ ಹೊತ್ತಿರುವ ಡಿ.ಕೆ.ಶಿವಕುಮಾರ್ ಹಾಗೂ ರೋಶನ್ ಬೇಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಮಾಡಿ ಸಿದ್ದರಾಮಯ್ಯನವರ ಸ್ವಾಭಿಮಾನಕ್ಕೆ ರಾಹುಲ್ ಗಾಂಧಿಯೇ ಕೊಡಲಿ ಪೆಟ್ಟು ನೀಡಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯ ಈಗ ಕಳಂಕ ಹೊತ್ತಿರುವ ಇಬ್ಬರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಯಡಿಯೂರಪ್ಪ ವಿರುದ್ಧ ಹೋರಾಟ ನಡೆಸಿ, ನೈತಿಕತೆ ಪ್ರಶ್ನಿಸುತ್ತಿದ್ದ ಅವರು ಈಗ ಜನರಿಗೆ ಏನು ಉತ್ತರ ಹೇಳುತ್ತಾರೆ? ಯಡಿಯೂರಪ್ಪ ಮೇಲೆ ಆರೋಪ ಬಂದಾಗ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದರು. ಲಾಡ್ ವಿರುದ್ಧ ಆರೋಪ ಕೇಳಿಬಂದಾಗ ಅವರಿಂದ ರಾಜಿನಾಮೆ ಪಡೆದುಕೊಂಡು. ಈಗ ಅವರಿಗಿಂತ ಹೆಚ್ಚು ಆರೋಪ ಎದುರಿಸುತ್ತಿರುವವರನ್ನು ಸಚಿವರನ್ನಾಗಿ ಮಾಡಿದ್ದಾರೆ. ಕಳಂಕಿತ ಸಚಿವರನ್ನು ಕೈಬಿಡುವಂತೆ ಆಗ್ರಹಿಸಿ ಎಲ್ಲ 224 ಕ್ಷೇತ್ರಗಳಲ್ಲಿ ಬಿಜೆಪಿ ಜ.8ರಂದು ಪ್ರತಿಭಟನೆ ನಡೆಸಲಿದೆ ಎಂದರು.
ಯಡಿಯೂರಪ್ಪಗೆ ಪಕ್ಷದಲ್ಲಿ ಯಾವ ಸ್ಥಾನಮಾನ ನೀಡಲಾಗುತ್ತಿದೆ ಎಂದು ಕೇಳಿದಾಗ, ಹುಲಿ ಎಲ್ಲಿದ್ದರೂ ಹುಲಿಯೇ. ಅವರಿಗೆ ಸ್ಥಾನಮಾನ ತಾನಾಗೇ ಸಿಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.
ಶ್ರೀರಾಮುಲು ಶೀಘ್ರ ಬಿಜೆಪಿಗೆ:ಮಾಜಿ ಸಚಿವ, ಬಿಎಸ್‌ಆರ್ ಸಂಸ್ಥಾಪಕ ಬಿ.ಶ್ರೀರಾಮುಲು ಶೀಘ್ರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗದಗದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.