ಹಾವೇರಿ

ಸಚಿವ ಸ್ಥಾನ: ಸಿದ್ದು ಮೌನ

Published On :

ಹಾವೇರಿ: ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದು, ಒಬ್ಬರನ್ನೂ ಏಕೆ ಸಚಿವರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಯಾವುದೇ ಉತ್ತರ ನೀಡದೆ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದರು. ಚುನಾವಣೆ ಪ್ರಚಾರದ ವೇಳೆ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಸಚಿವರನ್ನಾಗಿ ಮಾಡುತ್ತೇನೆ ಎಂದು ಜನರಿಗೆ ಭರವಸೆ ನೀಡಿದ್ದೀರಿ. ಆದರೆ ಮಾತು ತಪ್ಪಿದ್ದೀರಿ ಎಂದು ಸುದ್ದಿಗಾರರು ಗಮನ ಸೆಳೆದಾಗ, ನಾನು ಯಾರನ್ನೂ ಸಚಿವರನ್ನಾಗಿ ಮಾಡುತ್ತೇನೆ ಎಂದು ಹೇಳಿಯೇ ಇಲ್ಲ. ಯಾವ ಶಾಸಕರಿಗೂ ಇಂಥ ಶ್ವಾಸನೆ ನೀಡಿಲ್ಲ ಎಂದರು. ಹಾಗಾದರೆ ಕಾಂಗ್ರೆಸ್ ಶಾಸಕರಾದ ಕೋಳಿವಾಡ, ಮನೋಹರ ತಹಶೀಲ್ದಾರ ಅವರೇ ತಮ್ಮ ಕ್ಷೇತ್ರದಲ್ಲಿ ಪ್ರಚಾರದ ವೇಳೆ ನೀವು ಹಾಗೆ ಭರವಸೆ ನೀಡಿದ್ದಿರಿ ಎಂದು ಹೇಳುತ್ತಿದ್ದಾರಲ್ಲ ಎಂಬ ಮರು ಪ್ರಶ್ನೆಗೆ, ಪ್ರಚಾರದ ವೇಳೆ ಹಾಗೆ ಹೇಳಿಯೇ ಇಲ್ಲ. ಅವರವರೇ ಹೇಳಿಕೊಂಡಿರಬೇಕು ಎಂದು ಹೇಳುವ ಮೂಲಕ ಜಿಲ್ಲೆಯ ಹಿರಿಯ ಕಾಂಗ್ರೆಸ್ ಶಾಸಕರ ಸಚಿವ ಸ್ಥಾನದ ಕನಸಿಗೆ ಸಿದ್ದರಾಮಯ್ಯ ಸದ್ಯಕ್ಕೆ ಇತಿಶ್ರೀ ಹೇಳಿದರು. ಮುಖ್ಯಮಂತ್ರಿ ಜಿಲ್ಲೆಗೆ ಬಂದಾಗ ಸಚಿವ ಸ್ಥಾನದ ಬಗ್ಗೆ ಏನಾದರೂ ಹೇಳಬಹುದು ಎಂಂಬ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿ ಶಾಸಕರ ಲೆಕ್ಕಾಚಾರ ಬುಡಮೇಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.