ಹಾವೇರಿ

ಮಕ್ಕಳ ಪ್ರತಿಭೆ ಗುರುತಿಸಲು ಚಿಗುರು ಸಹಕಾರಿ

Published On :

ಹಾವೇರಿ: ಮಕ್ಕಳ ಪ್ರತಿಭೆ ಗುರುತಿಸಲು, ಸ್ಪರ್ಧಾ ಮನೋಭಾವ ಬೆಳೆಸಲು ಚಿಗುರು ಕಾರ್ಯಕ್ರಮ ಸಹಕಾರಿ ಎಂದು ನಗರಸಭೆ ಅಧ್ಯಕ್ಷ ಐ.ಯು. ಪಠಾಣ ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ, ಬಿಇಒ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 5ರಲ್ಲಿ ಶನಿವಾರ ಚಿಗುರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಶಿಕ್ಷಕಿ ಯು.ಎಂ. ಭೈರಮ್ಮನವರ, ಮಕ್ಕಳಿಗೆ ಕಂಪ್ಯೂಟರ್, ಸಮವಸ್ತ್ರ, ಡೆಸ್ಕ್, ಸಭಾಂಗಣ ಒದಗಿಸಬೇಕು ಎಂದು ನಗರಸಭೆ ಅಧ್ಯಕ್ಷರಿಗೆ ಮನವಿ ಮಾಡಿದರು. ಮಕ್ಕಳಿಗಾಗಿ ಏರ್ಪಸಿದ್ದ ರಸಪ್ರಶ್ನೆ, ಗಾಯನ, ಜನಪದ ನೃತ್ಯ ಹಾಗೂ ಕೋಲಾಟ ಸ್ಪರ್ಧೆಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ದಾದಾಪೀರ್ ಗಣಜೂರ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಜಂಗರಡ್ಡಿ, ಸಂಘಟಕ ಕೆ.ಆರ್. ಹಿರೇಮಠ, ಕರಿಯಪ್ಪ ಸುಣಗಾರ, ರಮೇಶ ಲೋಕಾಪುರ, ಬಡಿಗೇರ, ಹರ್ಷಾ ರೊಟ್ಟಿ, ನಗರಸಭೆ ಸದಸ್ಯ ಮಲ್ಲೇಶಪ್ಪ ಪಟ್ಟಣಶೆಟ್ಟಿ, ಎಸ್.ಬಿ. ಕಿತ್ತೂರಮಠ ಇದ್ದರು. ಎಸ್.ಎನ್. ಅಣ್ಣಿಗೇರಿ ಸ್ವಾಗತಿಸಿದರು. ಶಿಕ್ಷಕ ನಾಗರಾಜ ದೇಸಳ್ಳಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.