ರಾಜ್ಯದ 5000 ಕಿಮೀ ರಸ್ತೆ ಅಭಿವೃದ್ಧಿ: ಸಿದ್ದು
ಹಾವೇರಿ: ಕೇಂದ್ರ ಸರ್ಕಾರದ ಸಿಎಫ್ಆರ್ ಯೋಜನೆಯಿಂದ ರಸ್ತೆ ಅಭಿವೃದ್ಧಿಗಾಗಿ ರಾಜ್ಯಕ್ಕೆ ರು. 1800 ಕೋಟಿ ಮಂಜೂರಾಗಿದೆ. ಒಟ್ಟು 5000 ಕಿಮೀ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. 5 ವರ್ಷಗಳಲ್ಲಿ ಎಲ್ಲ ರಸ್ತೆಗಳ ಸುಧಾರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಿರೇಕೆರೂರಲ್ಲಿ ಶನಿವಾರ ಕುಮದ್ವತಿ ನದಿಗೆ ಸೇತುವೆ ಹಾಗೂ ರಟ್ಟಿಹಳ್ಳಿ-ಕಣವಿಸಿದ್ದಿಗೇರಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ, ಚುನಾವಣೆ ವೇಳೆ ನೀಡಿದ್ದ ಎಲ್ಲ ಭರವಸೆ ಈಡೇರಿಸಲು ಯತ್ನಿಸುವುದಾಗಿ ನುಡಿದರು.
5 ದಿನ ಕ್ಷೀರಭಾಗ್ಯ: ರಾಜ್ಯ ಸರ್ಕಾರ ಎಲ್ಲ ಜಾತಿ, ವರ್ಗದ ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಅನೇಕ ಜನಪರ ಯೋಜನೆ ಹಮ್ಮಿಕೊಂಡಿದೆ. ಅಪೌಷ್ಟಿಕತೆ ನಿವಾರಣೆಗೆ ಕ್ಷೀರಭಾಗ್ಯ ಯೋಜನೆ ಜಾರಿಗೆ ತರಲಾಗಿದ್ದು, ಸದ್ಯ 3 ದಿನ ವಿದ್ಯಾರ್ಥಿಗಳಿಗೆ ಹಾಲು ನೀಡಲಾಗುತ್ತಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ಅದನ್ನು 5 ದಿನಕ್ಕೆ ವಿಸ್ತರಿಸಲು ನಿರ್ಧರಿಸಲಾಗಿದೆ. ಪ್ರತಿ ಟನ್ ಕಬ್ಬಿಗೆ ಸರ್ಕಾರದಿಂದ ರು. 250 ಪ್ರೋತ್ಸಾಹಧನ ನೀಡುತ್ತಿರುವುದು ಇತಿಹಾಸದಲ್ಲೇ ಮೊದಲು ಎಂದು ಸಿಎಂ ತಿಳಿಸಿದರು.
ಶೀಘ್ರ ವೈದ್ಯರ ಹುದ್ದೆ ಭರ್ತಿ: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಹುದ್ದೆ ಖಾಲಿಯಿರುವುದರಿಂದ ತೊಂದರೆಯಾಗುತ್ತಿದೆ. ಹೈಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371ಜೆ ಕಲಂ ಜಾರಿಯಾಗಿರುವುದರಿಂದ ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚನೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯುತ್ತಿದೆ. ಹೈಕ ಭಾಗದವರಿಗೆ ಅನ್ಯಾಯವಾಗಬಾರದು ಎಂದು ಹುದ್ದೆ ಭರ್ತಿ ಮಾಡಿರಲಿಲ್ಲ. ಶೀಘ್ರದಲ್ಲಿ ವೈದ್ಯರು ಸೇರಿ ಎಲ್ಲ ಇಲಾಖೆಗಳ ಖಾಲಿ ಹುದ್ದೆ ಭರ್ತಿ ಮಾಡಲಾಗುವುದು. ಸರ್ವಜ್ಞ ಪ್ರಾಧಿಕಾರಕ್ಕೆ ಅನುದಾನ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ಸಕ್ಕರೆ ಸಚಿವ ಪ್ರಕಾಶ ಹುಕ್ಕೇರಿ, ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ, ಶಾಸಕರಾದ ಕೆ.ಬಿ. ಕೋಳಿವಾಡ, ಯು.ಬಿ. ಬಣಕಾರ, ಮನೋಹರ ತಹಶೀಲ್ದಾರ, ಶ್ರೀನಿವಾಸ ಮಾನೆ, ರಟ್ಟಿಹಳ್ಳಿ ಗ್ರಾಪಂ ಅಧ್ಯಕ್ಷ ಶಂಕರಗೌಡ ಚನ್ನಗೌಡರ, ತಾಪಂ ಅಧ್ಯಕ್ಷೆ ರೇಣುಕಾ ಚಲವಾದಿ, ಜಿಲ್ಲಾಧಿಕಾರಿ ಪಾಡುರಂಗ ನಾಯಕ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

