ಸಾಹಿತ್ಯ ಆಸ್ವಾದಿಸಿ: ಶಿಡ್ಲಾಪುರ
ಹಾನಗಲ್ಲ: ಸದಭಿರುಚಿಯ ಸಾಹಿತ್ಯ ಆಸ್ವಾದಿಸಿ. ಕ್ರಿಯಾಶೀಲತೆ, ಸದ್ಗುಣಗಳೊಂದಿಗೆ ಸಮಾಜಮುಖಿಯಾಗಿ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಪ್ರೊ ಮಾರುತಿ ಶಿಡ್ಲಾಪುರ ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಾಲಭವನ ಸೊಸೈಟಿ ಹಾಗೂ ಶಿಕ್ಷಣ ಇಲಾಖೆ ನಗರದ ಸ್ತ್ರೀಶಕ್ತಿ ಭವನದಲ್ಲಿ ಆಯೋಜಿಸಿದ್ದ 'ಮಕ್ಕಳ ಸಾಹಿತ್ಯ ಕಮ್ಮಟ ಹಾಗೂ ಕ್ರಿಯಾತ್ಮಕ ಬರವಣಿಗೆ' ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜನಾಧಿಕಾರಿ ಬಿ.ಆರ್. ಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕುಮಾರೇಶ್ವರ ಶಿಕ್ಷಣ ಕಾಲೇಜಿನ ಉಪನ್ಯಾಸಕ ವಿ.ವಿ. ಬೋಂದಾಡೆ, ಚಿತ್ರಕಲಾ ಶಿಕ್ಷಕ ರವಿ ಗುಡಿಸಾಗರ, ಸಂಗೀತ ಶಿಕ್ಷಕಿ ಸುಧಾ ಹೊಸಮನಿ, ದೈಹಿಕ ಶಿಕ್ಷಣ ತರಬೇತುದಾರರಾದ ಜಯಶ್ರೀ ಲಿಂಗೇರಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಬಿ. ರಾಜೇಶ್ವರಿ, ರಾಜಶ್ರೀ ದ್ಯಾಮಣ್ಣನವರ, ಶೋಭಾ ಹುದ್ದಾರ, ಶಿಕ್ಷಕ ಗೂಳಪ್ಪನವರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

