ಹಾವೇರಿ

ಹಾವೇರಿ: ಕೆಜೆಪಿ ಕಾರ್ಯಕರ್ತರ ಸಭೆ ನಾಳೆ

Published On :

ಹಾವೇರಿ: ಬಿಜೆಪಿ ಸೇರ್ಪಡೆ ಕುರಿತು ಚರ್ಚಿಸಲು ಜಿಲ್ಲಾ ಕೆಜೆಪಿ ಕಾರ್ಯಕರ್ತರ ಸಭೆಯನ್ನು ಜ. 8ರಂದು ಬೆಳಗ್ಗೆ 11 ಗಂಟೆಗೆ ನಗರದ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಕರೆಯಲಾಗಿದೆ. ಕೆಜೆಪಿ ರಾಜ್ಯ ಘಟಕದ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಕೆಜೆಪಿ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಸಿ.ಎಂ. ಉದಾಸಿ ನೇತೃತ್ವ ವಹಿಸಲಿದ್ದು, ಶಾಸಕ ಯು.ಬಿ. ಬಣಕಾರ, ಮಾಜಿ ಶಾಸಕ ನೆಹರೂ ಓಲೇಕಾರ, ಜಿ. ಶಿವಣ್ಣ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ ಮುಂತಾದವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬಿಜೆಪಿ ಸೇರ್ಪಡೆ ಹಾಗೂ ಆ ಪಕ್ಷದ ಸದಸ್ಯತ್ವ ಪಡೆಯುವ ಬಗ್ಗೆ ಚರ್ಚಿಸಲಾಗುವುದು. ಪಕ್ಷದ ಜಿಲ್ಲೆ ಹಾಗೂ ತಾಲೂಕಿನ ಎಲ್ಲ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಎಪಿಎಂಸಿ ಮತ್ತು ಸ್ಥಳೀಯ ಸಂಘ, ಸಂಸ್ಥೆಗಳ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ಕರು ಹಾಗೂ ಅಭಿಮಾನಿಗಳು ಭಾಗವಹಿಸಿ ಸೂಕ್ತ ಸಲಹೆ-ಸೂಚನೆ ನೀಡಬೇಕೆಂದು ಪಕ್ಷದ ಜಿಲ್ಲಾ ವಕ್ತಾರ ಸುರೇಶ ಎಂ. ಹೊಸಮನಿ ವಿನಂತಿಸಿದ್ದಾರೆ.
ಅಪಘಾತ ತಡೆ: ಹೆದ್ದಾರಿ ಪರಿಶೀಲನೆ ಇಂದು
ಶಿಗ್ಗಾಂವಿ: ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಕೈಗೊಂಡಿದ್ದರಿಂದ ಹೆಚ್ಚಿರುವ ಅಪಘಾತ ತಡೆದು ಸರಿಪಡಿಸವ ನಿಟ್ಟಿನಲ್ಲಿ ಸಂಸದ ಪ್ರಹ್ಲಾದ ಜೋಶಿ, ಶಾಸಕ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಜ. ರಂದು ಬೆಳಗ್ಗೆ 10 ಗಂಟೆಗೆ ಹೆದ್ದಾರಿ ಪರಿಶೀಲನೆ ನಡೆಸಲಿದೆ. ರೈತರು, ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿರುವಂತೆ ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ಮನವಿ ಮಾಡಿದ್ದಾರೆ. ಸೋಮವಾರ ಪಟ್ಣಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ತಡಸ ಕ್ರಾಸ್‌ನಿಂದ ವರದಾಹಳ್ಳಿವರೆಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮಸ್ಥರಿಗೆ ಓಡಾಡಲು ಅವಶ್ಯ ಸ್ಥಳದಲ್ಲಿ ಓವರ್ ಬ್ರಿಜ್, ಸರ್ವೀಸ್ ರಸ್ತೆ, ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಒತ್ತಾಯಿಸುತ್ತಲೇ ಇದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಆಗಮಿಸಲಿದ್ದು, ಸಾರ್ವಜನಿಕರು ಹಾಜರಿದ್ದು ಸಮಸ್ಯೆಗಳನ್ನು ವಿವರಿಸುವಂತೆ ಸೂಚಿಸಿದ್ದಾರೆ. ಹೆದ್ದಾರಿ ಕಾಮಗಾರಿ ಆರಂಭದಲ್ಲಿ ಊರಿಗೊಂದು ಸರ್ವೀಸ್ ರಸ್ತೆ, ಪಾದಚಾರಿ ದಾರಿ, ರೈತ-ಕೂಲಿ ಕಾರ್ಮಿಕರು ಓಡಾಡಲು ಓವರ್ ಬ್ರಿಜ್ ನಿರ್ಮಿಸಲು ಸಂಸದ ಪ್ರಹ್ಲಾದ ಜೋಶಿ ಸಾಕಷ್ಟು ಬಾರಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದರೂ ಸಮಸ್ಯೆಗೆ ಕೇಂದ್ರ ಸರ್ಕಾರ ಪರಿಹಾರ ಕಲ್ಪಿಸಿಲ್ಲ. ಅಧಿಕಾರಿಗಳ ಭೇಟಿ ನೀಡಿದ ಮೇಲೂ ಪರಿಹಾರ ಸಿಗದಿದ್ದಲ್ಲಿ ಹೋರಾಟ ಕೈಗೊಳ್ಳುವುದಾಗಿ ಬೇವಿನಮರದ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.