ಇಂದು ಬಿಜೆಪಿ ಪ್ರತಿಭಟನೆ
ರಾಣಿಬೆನ್ನೂರು: ಕೇಂದ್ರ ಸರ್ಕಾರ ಅಡುಗೆ ಅನಿಲ ಮತ್ತಿತರ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಿಸಿದ್ದನ್ನು ವಿರೋಧಿಸಿ ಜ. 8ರಂದು ಸಂಗಮ್ ವೃತ್ತದಲ್ಲಿರುವ ಬಿಜೆಪಿ ತಾಲೂಕು ಕಚೇರಿಯಿಂದ ತಹಸೀಲ್ದಾರ್ ಕಾರ್ಯಾಲಯದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಅಲ್ಲಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮೈತ್ರಾ ಹದಡಿ, ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ರಾಜೇಂದ್ರ ಬಾಕಳೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ವಿದ್ಯುತ್ ವ್ಯತ್ಯಯ
ಹಾವೇರಿ: ಹಾನಗಲ್ಲ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ. 8ರಂದು ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ, ಎಲ್ಲ 11 ಕೆವಿ ಫೀಡರ್ ಹಾಗೂ 33 ಕೆವಿ ವಿದ್ಯುತ್ ವಿದ್ಯುತ್ ವಿತರಣಾ ಕೇಂದ್ರಗಳಾದ ಬೆಳಗಾಲಪೇಟ, ಬೊಮ್ಮನಹಳ್ಳಿ, ಪಾಳಾ, ಅಕ್ಕಿಆಲೂರ, ಲಕ್ಷ್ಮೀಪುರ ಸ್ಟೇಶನ್ಗಳಿಗೆ ಹಾಗೂ ಈ ಸ್ಟೇಶನ್ಗಳಿಂದ ಹೊರ ಹೋಗುವ ಎಲ್ಲ 11 ಕೆವಿ ಫೀಡರ್ಗಳಿಗೆ ಮತ್ತು ಬಸಾಪುರ ಏತ ನೀರಾವರಿ ಯೋಜನೆ ಫೀಡರ್ಗಳಿಗೆ ಬುಧವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಹಾಗೂ ಈ ಫೀಡರ್ಗಳ ವ್ಯಾಪ್ತಿಗೆ ಬರುವ ಎಲ್ಲ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂನ ಹಾವೇರಿ ವಿಭಾಗದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಓ.ಎಸ್. ಶಶಿಧರ ವಿನಂತಿಸಿದ್ದಾರೆ.
ಇಂದು ವಾರ್ಷಿಕೋತ್ಸವ
ಬ್ಯಾಡಗಿ: ಮೋಟೆಬೆನ್ನೂರು ನವೋದಯ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಜ. 8ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟಿಸಲಿದ್ದು, ತಾಪಂ ಮಾಜಿ ಅಧ್ಯಕ್ಷ ವೀರಣ್ಣ ಬಳ್ಳಾರಿ ಅಧ್ಯಕ್ಷತೆ ವಹಿಸುವರು. ಎಪಿಎಂಸಿ ಅಧ್ಯಕ್ಷ ಜಗದೀಶ ಕಣಗಲಭಾವಿ, ಸದಸ್ಯ ಹಾಲೇಶ ಬ್ಯಾಡಗಿ, ತಾಪಂ ಅಧ್ಯಕ್ಷೆ ಚಿನ್ನಮ್ಮ ಫಾಸಿ, ಉಪಾಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ, ಜಿಪಂ ಸದಸ್ಯರಾದ ವಿರೂಪಾಕ್ಷಪ್ಪ ಬಳ್ಳಾರಿ, ಶಂಕ್ರಣ್ಣ ಮಾತನವರ, ಗದಿಗೆಮ್ಮ ಬಸನಗೌಡ್ರ, ತಾಪಂ ಸದಸ್ಯ ನಾಗರಾಜ ಬಳ್ಳಾರಿ, ಗ್ರಾಪಂ ಅಧ್ಯಕ್ಷೆ ನೀಲಮ್ಮ ಗೊರವರ, ಉಪಾಧ್ಯಕ್ಷ ವಿಜಯಕುಮಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಕೊಡ್ಲಿ, ಕ್ಯಾನಕೋರ ಕಲರ್ಸ್ನ ವ್ಯವಸ್ಥಾಪಕ ನಿರ್ದೇಶಕ ಕಿಶನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನಕುಮಾರ, ಸಮನ್ವಯಾಧಿಕಾರಿ ಜಿ. ಸುಮಾ, ಜಿ.ಸಿ. ಪೀರಜಾದೆ, ಬಿ.ಎಚ್.ಎನ್. ರಾವಳ ಆಗಮಿಸುವರು.
ಉದ್ಘಾಟನೆ ಮುಂದಕ್ಕೆ: ಜ. 8ರಂದೇ ನಡೆಯಬೇಕಾಗಿದ್ದ ಅಕ್ಷರ ದಾಸೋಹ ಯೋಜನೆಯಡಿ ನಿರ್ಮಿಸಲಾಗಿರುವ ಅಡುಗೆ ಮನೆ ಉದ್ಘಾಟನೆಯನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

