ಸಂಬಂಧ ವ್ಯಾವಹಾರಿಕ: ಸಿರಿಗೆರೆ ಶ್ರೀ ವಿಷಾದ
ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಜ. 9
ನಿತ್ಯದ ಜಂಜಾಟದಲ್ಲಿ ಸಂಬಂಧಗಳು ಸತ್ವ ಕಳೆದುಕೊಂಡು, ವ್ಯಾವಹಾರಿಕ ಆಗುತ್ತಿವೆ ಎಂದು ಸಿರಿಗೆರೆ ಬೃಹನ್ಮಠದ ತರಳಬಾಳು ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವಿಷಾದಿಸಿದರು.
ಫೆ. 6ರಂದು ನಡೆಯುವ ತರಳಬಾಳು ಹುಣ್ಣಿಮೆ ಮಹೋತ್ಸವದ ಮಹಾಮಂಟಪಕ್ಕೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿದ ಅವರು, ಮನುಷ್ಯನಿಗೆ ಪ್ರೀತಿ ಬೇಕು. ಪ್ರೀತಿ, ಸೇವೆಯ ಬುತ್ತಿ ಎಂದಿಗೂ ಬತ್ತಬಾರದು. ಪ್ರೀತಿಯ ಮುಂದುವರಿದ ಭಾಗವೇ ಭಕ್ತಿ ಎಂದರು.
ತರಳಬಾಳು ಹುಣ್ಣಿಮೆ ಮಹೋತ್ಸವದ ಅಧ್ಯಕ್ಷ, ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ನಮ್ಮ ಗುಣಧರ್ಮದಲ್ಲಿ ಬದಲಾವಣೆ ಅಗತ್ಯವಿದೆ. ಅದು ಹುಣ್ಣಿಮೆಯಿಂದ ಆಗುತ್ತದೆ ಎಂಬ ವಿಶ್ವಾಸವಿದೆ ಎಂದರು.
ಸಮಿತಿ ಉಪಾಧ್ಯಕ್ಷ, ಮಾಜಿ ಸಂಸದ ಮಂಜುನಾಥ ಕುನ್ನೂರ ಮಾತನಾಡಿ, ಬೇಡ್ತಿ ಹಾಗೂ ವರದಾ ನದಿ ಜೋಡಣೆಯಿಂದ ಶಿಗ್ಗಾಂವಿ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದರು.
ಹರಿಹರದ ಪಂಚಮಸಾಲಿ ಪೀಠದ ಸಿದ್ದಲಿಂಗ ಮಹಾಸ್ವಾಮಿಗಳು, ಕಾಗಿನೆಲೆ ಕನಕ ಗುರು ಪೀಠದ ನಿರಂಜನಾನಂದಪುರಿ ಮಹಾಸ್ವಾಮಿಗಳು, ಬಂಕಾಪುರ ಅರಳೇಲೆ ಹಿರೇಮಠದ ರೇವಣಶಿದ್ದೇಶ್ವರ ಶಿವಾಚಾರ್ಯ ಆಶೀರ್ವಚನ ನೀಡಿದರು.
ಮಾಜಿ ಶಾಸಕ ರಾಜಶೇಖರ ಸಿಂಧೂರ, ಹುಣ್ಣಿಮೆಯ ಗೌರವಾಧ್ಯಕ್ಷ ಶಂಕರಗೌಡ ಪಾಟೀಲ್, ತಾಪಂ ಅಧ್ಯಕ್ಷೆ ಸುಜಾತಾ ಕಲಕಟ್ಟಿ, ಜಿಪಂ ಸದಸ್ಯ ಸಿ.ಎಸ್. ಪಾಟೀಲ್, ಸರೋಜಾ ಆಡಿನ, ಜಿಪಂ ಮಾಜಿ ಅಧ್ಯಕ್ಷೆ ಪ್ರೇಮಾ ಪಾಟೀಲ್, ಹಿರೇಕೆರೂರು ಎಪಿಎಂಸಿ ಅಧ್ಯಕ್ಷ ಎಸ್.ಎಸ್. ಪಾಟೀಲ್, ಸಣ್ಣಪ್ಪ ಬುಳ್ಳಕ್ಕನವರ, ಚನ್ನಪ್ಪ ಮಂತ್ರೋಡಿ ಇದ್ದರು. ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ಸ್ವಾಗತಿಸಿದರು. ಸಿರಿಗೆರಿ ಮಠದ ಉಪನ್ಯಾಸಕ ರಾಜಶೇಖರಯ್ಯ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

