ಸುದ್ದಿ ಸಂಕ್ಷೇಪ
13ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ
ಹಾವೇರಿ: ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮ ಜ. 13ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದರು. ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಜರುಗಿದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಿದ್ಧರಾಮೇಶ್ವರರ ಬಗ್ಗೆ ಉಪನ್ಯಾಸ, ವಚನ ಮತ್ತು ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗುವುದೆಂದು ತಿಳಿಸಿದರು. ಸಭೆಯಲ್ಲಿ ಜಿಪಂ ಸಿಇಒ ಕೆ.ಬಿ. ಆಂಜನಪ್ಪ, ಎಸ್ಪಿ ಎನ್. ಶಶಿಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಇದ್ದರು.
16ರಂದು ಕಟ್ಟಡ ಕಾರ್ಮಿಕರ ಸಮಾವೇಶ
ಹಾವೇರಿ: ಕಟ್ಟಡ ಕಾರ್ಮಿಕರ ಪ್ರಥಮ ಜಿಲ್ಲಾ ಸಮಾವೇಶ ಜ. 16ರಂದು ನಗರದ ಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ರಾಜ್ಯ ಅಧ್ಯಕ್ಷ ರಾಜನಹಳ್ಳಿ ಮಂಜುನಾಥ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಅಂದು ಮಧ್ಯಾಹ್ನ 2 ಗಂಟೆಗೆ ಸಮಾವೇಶ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಮುರುಘಾಮಠದಿಂದ ಕಾರ್ಮಿಕರ ಮೆರವಣಿಗೆ ನಡೆಯಲಿದೆ. ಸಮಾವೇಶದ ಜಾಗೃತಿಗಾಗಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಐದು ಸಾವಿರಕ್ಕೂ ಹೆಚ್ಚಿನ ಕಾರ್ಮಿಕರು ಭಾಗವಹಿಸುವರು. ಸಮಾವೇಶದ ಮೂಲಕ ಕಟ್ಟಡ ಕಾರ್ಮಿಕರ ಸಂಘಟನೆ ಬಲಗೊಳಿಸಲಾಗುವುದು ಎಂದು ಹೇಳಿದರು. ಕಟ್ಟಡ ಕಾರ್ಮಿಕರಿಗೆ ಅಜೀವ ಸದಸ್ಯತ್ವ, ಇಎಸ್ಐ ಸೌಲಭ್ಯವನ್ನು ಕುಟುಂಬದ ಎಲ್ಲ ಸದಸ್ಯರಿಗೆ ವಿಸ್ತರಣೆ, ಹೋಬಳಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಜಮೀನು ಖರೀದಿಸಿ ಮನೆ ನಿರ್ಮಿಸಿ ಹಕ್ಕು ಪತ್ರ ನೀಡುವುದು, ವಲಸೆ ಕಾರ್ಮಿಕರಿಗೆ ವಸತಿ ನಿರ್ಮಾಣಕ್ಕೆ ತಡೆ, ಕಟ್ಟಡ ಕಟ್ಟುವ ಸಾಮಗ್ರಿಗಳಿಗೆ ರು. 25 ಸಾವಿರ ನೀಡುವುದು, ಕಟ್ಟಡ ಕಾರ್ಮಿಕರ ಮತ್ತು ಅವರ ಮಕ್ಕಳ ಮದುವೆಗೆ ನೀಡುವ ರು. 50 ಸಾವಿರ ಸಹಾಯಧನವನ್ನು ರು. 1 ಲಕ್ಷಕ್ಕೆ ಏರಿಸುವುದು, ಅನಾಹುತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ರು. 3 ಲಕ್ಷ, ಸಹಜ ಸಾವಿಗೆ ರು. 2 ಲಕ್ಷ ಪರಿಹಾರ ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಸಮಾವೇಶವನ್ನು ಕಾರ್ಮಿಕ ಸಚಿವ ಪಿ. ಪರಮೇಶ್ವರ ನಾಯ್ಕ ಉದ್ಘಾಟಿಸಲಿದ್ದಾರೆ ಎಂದು ಮಂಜುನಾಥ ತಿಳಿಸಿದರು.
ಪುಟ್ಟಮ್ಮ ಕಬ್ಬಿಣಕಂಥಿ ನಿಧನ
ಹಿರೇಕೆರೂರು: ತಾಲೂಕಿನ ರಟ್ಟಿಹಳ್ಳಿಯ ಪುಟ್ಟಮ್ಮ ಚಂದ್ರಶೇಖರ ಕಬ್ಬಿಣಕಂಥಿಮಠ (83) ಗುರುವಾರ ನಿಧನರಾದರು. ಅವರಿಗೆ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಇಬ್ಬರು ಪುತ್ರರು ಹಾಗೂ 6 ಹೆಣ್ಣು ಮಕ್ಕಳಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

