ಹಾವೇರಿ

ತಾಲೂಕಿಗೊಂದು ಕ್ರೀಡಾ ಶಾಲೆ: ಮುಚ್ಚಟ್ಟಿ ಆಗ್ರಹ

Published On :

ಬ್ಯಾಡಗಿ: ಪ್ರತಿಯೊಂದು ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ಕ್ರೀಡಾ ತರಬೇತಿ ಶಾಲೆಗಳನ್ನು ಪ್ರಾರಂಭಿಸುವ ಮೂಲಕ ವಿನಾಶದ ಹಾದಿ ಹಿಡಿದಿರುವ ದೇಶೀಯ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ತಾಪಂ ಉಪಾಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಆಣೂರು ಗ್ರಾಮದಲ್ಲಿ ಎಸ್.ಬಿ.ಎಚ್. ಪ್ರೌಢಶಾಲೆ ಮತ್ತು ಬ್ಯಾಡಗಿ ಚಿಲ್ಲೀಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಆಯೋಜಿಸಿದ್ದ ಸಬ್ ಜ್ಯೂನಿಯರ್ ಬಾಲಕರ ಹಾಗೂ ಬಾಲಕಿಯರ ಖೋಖೋ ತರಬೇತಿ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಕ್ರೀಡಾಪಟುಗಳಿಗೆ ಸರ್ಕಾರದಿಂದ ಸೌಲಭ್ಯ ಸಿಗುವಲ್ಲಿ ತಾರತಮ್ಯವಾಗುತ್ತಿದೆ. ಖೋಖೋ, ಕಬಡ್ಡಿ ಮುಂತಾದ ದೇಶೀಯ ಕ್ರೀಡೆಗಳನ್ನು ಉಳಿಸಲು ಸರ್ಕಾರದ ನೆರವಿನ ಅಗತ್ಯವಿದೆ. ಏಕರೂಪದ ಕ್ರೀಡಾನೀತಿ ಜಾರಿಗೆ ತರುವುದರಿಂದ ಎಲ್ಲ ಕ್ರೀಡಾಪಟುಗಳೂ ಸೌಲಭ್ಯ, ಉದ್ಯೋಗಾವಕಾಶ ಪಡೆಯುವುದು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಹಿರಿಯ ಕ್ರೀಡಾಪಟು ಬಸವಂತಪ್ಪ ಹುಲ್ಲತ್ತಿ ಹಾಗೂ ಶಂಕರಗೌಡ ಪಾಟೀಲ ಮಾತನಾಡಿ, ಖಾಸಗಿ ಸಂಸ್ಥೆಗಳ ಶ್ರಮ ಹಾಗೂ ಸಾರ್ವಜನಿಕರ ವಂತಿಗೆಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖೋಖೋ ಖ್ಯಾತಿ ಪಡೆಯುವುದು ಸಾಧ್ಯವಿಲ್ಲ. ಪ್ರೇಕ್ಷಕರ ಅಭಿಮಾನದ ಚಪ್ಪಾಳೆಯಿಂದ ಬಡ ಕ್ರೀಡಾಪಟುಗಳ ಹೊಟ್ಟೆ ತುಂಬುವುದಿಲ್ಲ. ಸರ್ಕಾರಗಳೇ ಕ್ರೀಡೆ, ಕ್ರೀಡಾಪಟುಗಳನ್ನು ಉಳಿಸಬೇಕು ಎಂದರು.
ನ್ಯಾಯವಾದಿ ಎಸ್.ಎಸ್. ಬಡ್ಡಿಯವರ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಎಸ್.ಆರ್.ಬಡ್ಡಿಯವರ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಬ್ ಜ್ಯೂನಿಯರ್ ಮತ್ತು ಮಹಿಳಾ ಪಂದ್ಯಾವಳಿಗೆ ತೆರಳುತ್ತಿರುವ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಿಸಲಾಯಿತು. ತರಬೇತುದಾರ ಜಿತೇಂದ್ರ ಸುಣಗಾರ, ಎಂ.ಬಿ. ಕೊಟ್ಟಿಕೇರಿ ಇದ್ದರು. ಕಳ್ಳಿಮನಿ ಸ್ವಾಗತಿಸಿ, ನಿರೂಪಿಸಿದರು. ಎಂ.ಎಸ್. ಕರ್ಜಗಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.