ಶಿಕ್ಷಣದಿಂದ ಸರ್ವಾಂಗೀಣ ವಿಕಾಸ: ರಾಜೇಂದ್ರ
ಹಾವೇರಿ: ಮನುಷ್ಯನ ವಿಕಾಸ ಮತ್ತು ಅಭಿವೃದ್ಧಿಗೆ ಶಿಕ್ಷಣ ಅಗತ್ಯ. ವಿದ್ಯಾರ್ಥಿಗಳು ಬೌದ್ಧಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಲು ನಿರಂತರ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ ಹೇಳಿದರು.
ನಗರದ ಸೇಂಟ್ ಆನ್ಸ್ ಶಾಲೆಯಲ್ಲಿ ಗುರುವಾರ ಜಿಪಂ, ತಾಪಂ, ಸಾರ್ವಜನಿಕರ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಕಲಿಕೋತ್ಸವ ಹಾಗೂ ವಿಶೇಷ ಮಕ್ಕಳಿಗೆ ಸಾಧನಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲು ಗುಣಾತ್ಮಕ ಶಿಕ್ಷಣದಡೆಗೆ ನಮ್ಮ ನಡಿಗೆ ಕಾರ್ಯಕ್ರಮದಡಿ ಆಯೋಜಿಸುವ ಪಠ್ಯವಿಷಯ ಆಧಾರಿತ ಕಲಿಕೋತ್ಸವ ಪೂರಕವಾಗಿದೆ. ಮಕ್ಕಳು ಇದರ ಸದುಪಯೋಗ ಪಡೆದು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಬೇಕು ಎಂದು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷೆ ಸಾವಿತ್ರಮ್ಮ ರಾಮನಗೌಡ್ರ ಮಾತನಾಡಿ, ಶಿಕ್ಷಕರು ಮಕ್ಕಳಲ್ಲಿ ಯಾವುದೇ ಭಿನ್ನತೆ ಅನುಸರಿಸದೆ, ಎಲ್ಲರೂ ನಮ್ಮ ಮಕ್ಕಳೆಂದು ತಿಳಿದು ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕೆಂದು ಹೇಳಿದರು.
ವಿಕಲಾಂಗರಿಗೆ ಟ್ರೈಸಿಕಲ್ ಹಾಗೂ ಇತರ ಸಾಧನ-ಸಲಕರಣೆ ವಿತರಿಸಲಾಯಿತು. ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜವ್ವ ಆಡಿನ, ಸದಸ್ಯರಾದ ಯಲ್ಲವ್ವ ಚಪ್ಪರದ, ವಸಂತ ಕಳಸಣ್ಣನವರ, ತಾಪಂ ಅಧ್ಯಕ್ಷೆ ಲಕ್ಷ್ಮವ್ವ ಮೇಲ್ಮುರಿ, ಡಯಟ್ ಪ್ರಾಚಾರ್ಯ ಎಂ.ಡಿ. ಬಳ್ಳಾರಿ, ಸಮನ್ವಯಾಧಿಕಾರಿ ಕೆ.ಎಫ್. ಭಜಂತ್ರಿ, ಸೇಂಟ್ ಆನ್ಸ್ ಶಾಲೆಯ ಮುಖ್ಯ ಶಿಕ್ಷಕಿ ಶರ್ಲಿನ್ ಥಾಮಸ್, ಶಿಕ್ಷಣ ಚಿಂತಕ ನಿಜಲಿಂಗಪ್ಪ ಬಸೇಗಣ್ಣಿ, ಆರ್.ಎನ್. ಕರ್ಜಗಿ ಇದ್ದರು. ದೈಹಿಕ ಶಿಕ್ಷಣಾಧಿಕಾರಿ ಎನ್.ಐ. ಇಚ್ಚಂಗಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಪ್ರಾಸ್ತಾವಿಕ ಮಾತನಾಡಿದರು. ನಾಗರಾಜ ದೇಸಳ್ಳಿ ನಿರೂಪಿಸಿದರು. ವಿ.ವಿ. ಕಮತರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

