ಹಾವೇರಿ

ಸುದ್ದಿ ಸಂಕ್ಷೇಪ

Published On :

ಜನ ಪಾಲ್ಗೊಳ್ಳುವಿಕೆ ಕಮ್ಮಿ
ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ನಡೆಯಿತು. ಊಟ, ವಸತಿ ಸೇರಿದಂತೆ ಅತಿಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗಿದೆ. ಆದರೆ ಚಳಿ ಹಾಗೂ ವಸತಿ ಸಮಸ್ಯೆ ಎದುರಾಗಬಹುದು ಎಂಬ ಕಾರಣಕ್ಕಾಗಿ ಈ ಹಿಂದಿನ ಸಮ್ಮೇಳನಗಳಿಗಿಂತ ಸಾಹಿತ್ಯಾಸಕ್ತರ ಸಂಖ್ಯೆ ಕಡಿಮೆಯಿತ್ತು. ಅಲ್ಲದೆ ಸಮಾನಾಂತರ ವೇದಿಕೆಗಳಲ್ಲೂ ಜನರ ಪಾಲ್ಗೊಳ್ಳುವಿಕೆ ಇರಲಿಲ್ಲ. ಗೋಷ್ಠಿಗಳಲ್ಲಿ ಇನ್ನೂ ಉತ್ತಮ ವಿಷಯಗಳನ್ನು ಇಡಬೇಕಿತ್ತು.
- ವಿರೂಪಾಕ್ಷಪ್ಪ ಪಡಿಗೋದಿ, ಹಾವೇರಿ
ಪ್ರತಿಭೆ, ಚೈತನ್ಯ ವೃದ್ಧಿಗೆ ಸಾಂಸ್ಕೃತಿಕ ಕಾರ್ಯಕ್ರಮ
ಶಿಗ್ಗಾಂವಿ:3 ವಿದ್ಯಾರ್ಥಿಗಳ ಪ್ರತಿಭೆ ಮತ್ತು ಚೈತನ್ಯ ವೃದ್ಧಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯ ಎಂದು ಜಾನಪದ ವಿವಿ ಕುಲಪತಿ ಪ್ರೊ೤ ಅಂಬಳಿಕೆ ಹಿರಿಯಣ್ಣ ಅಭಿಪ್ರಾಯಪಟ್ಟರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಡುಮನೆ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕುಲಸಚಿವ ಪ್ರೊ೤ ಡಿ.ಬಿ. ನಾಯಕ, ಮೌಲ್ಯಮಾಪನ ಕುಲಸಚಿವ ಪ್ರೊ೤ ಸ.ಚಿ. ರಮೇಶ, ಹಿರಿಯ ಸಂಶೋಧನಾಧಿಕಾರಿ ಡಾ೤ ಕೆ. ಪ್ರೇಮಕುಮಾರ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಉನ್ನತ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು. ನೂತನ ವಿದ್ಯಾರ್ಥಿಗಳಾದ ಎನ್.ಎನ್. ಸಕ್ರಿ ಹಾಗೂ ಕವಿತಾ ಚವ್ಹಾಣ ಅಭಿಪ್ರಾಯ ಹಂಚಿಕೊಂಡರು. ಎಂಬಿಎ ವಿಭಾಗದ ಮುಖ್ಯಸ್ಥ ಪ್ರೊ೤ ಚಂದ್ರ ಪೂಜಾರಿ, ಸಂದರ್ಶಕ ಪ್ರಾಧ್ಯಾಪಕ ಡಾ೤ ಕೆ. ಕಮಲಾಕ್ಷ ಇದ್ದರು. ಶರೀಫ ಮಾಕಪ್ಪನವರ ಪ್ರಾರ್ಥಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.