ಹಾವೇರಿ

ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಜ. 10
ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ನಗರದ ನ್ಯಾಯಾಲಯದ ಎದುರು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲು ಮುಂದಾಗಿದ್ದ ಕಾರಣ ಪೋಲಿಸರು ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಬಂಧಿಸಿ ಬಿಡುಗಡೆಗೊಳಿಸಿದರು.
ಕೆಇಬಿ ಗಣೇಶ ದೇವಸ್ಧಾನದ ಹತ್ತಿರ ಸೇರಿದ್ದ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾವಿರಾರು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ರತ್ನ ಎಲಿಗಾರ, ರಾಜ್ಯಾದ್ಯಂತ 38 ವರ್ಷಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ನೀಡುತ್ತ ಹಳ್ಳಿಗಾಡಿನ ಪ್ರದೇಶದಲ್ಲಿನರುವ ಗರ್ಭಿಣಿ ಮತ್ತು ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಸರ್ಕಾರದ ಪೌಷ್ಟಿಕ ಆಹಾರವನ್ನು ಮನೆ ಮನೆಗೆ ತೆರಳಿ ವಿತರಿಸುವುದರ ಜತೆಗೆ ಕಾಲ ಕಾಲಕ್ಕೆ ಲಸಿಕೆ, ಚುಚ್ಚುಮದ್ದು ಹಾಕಿಸುವ ಕಾರ್ಯವನ್ನು ಮಾಡುತ್ತಿರುವ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸರ್ಕಾರ ನ್ಯಾಯಯುತವಾಗಿ ನೀಡಬೇಕಾಗಿರುವ ಸಂಬಳವನ್ನು ಸಮಯಕ್ಕೆ ಸರಿಯಾಗಿ ನೀಡದಿರುವ ಕಾರಣ ನಮ್ಮ ಜೀವನ ನಿರ್ವಹಣೆ ತುಂಬಾ ತೊಂದರೆದಾಯಕವಾಗಿದ್ದು, ಗೌರವಧನ ಬದಲು ಮಾಸಿಕ ರು. 12,500 ವೇತನ ನೀಡಬೇಕು.
ತಮ್ಮ ಕೆಲಸ ಕಾರ್ಯಗಳ ಜತೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಯೋಜನೆಗಳ ಕೆಲಸ ಕಾರ್ಯಗಳು ಮತ್ತು ಸ್ಥಳೀಯ ಆಡಳಿತ ಮಂಡಳಿಯವರು ಹೇಳುವ ಕೆಲಸ, ಕಾರ್ಯಗಳನ್ನು ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಸಿ ಮತ್ತು ಡಿ ಗ್ರೂಪ್ ನೌಕರರೆಂದು ಕಾಯಂಗೊಳಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆ ಹಿಂದೆ ಪಡೆಯುವಂತೆ ಮತ್ತು ಮೊಟಕುಗೊಳಿಸುವಂತೆ ತಿಳಿಸಿದ್ದ ಸಮಯ ಹೆಚ್ಚಿನ ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು ಗದ್ದಲ, ಗಲಾಟೆ ನಡೆಸಲಾರಂಭಿಸಿದ್ದ ಕಾರಣ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆಗೊಳಿಸಿದರು.
ಪ್ರತಿಭಟನೆಯಲ್ಲಿ ನಾಗಮ್ಮ ಮುದುಕಣ್ಣನವರ, ಭಾರತಿ ಕೋಪರಡೆ, ಮಹಾಲಕ್ಷ್ಮಿ ಚಲವಾದಿ, ಚಂದ್ರಕಲಾ ಪುರವಂತರ, ಹಾಲಮ್ಮ ಕಟ್ಟಿಮನಿ, ರುಂದಾ ಜಾಧವ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.