ಹಾವೇರಿ

ಹಾವೇರಿ: 13ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಜ. 10
ಜಿಲ್ಲಾ ಆಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕಮ ಜ. 13ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ನಡೆಯಲಿದೆ.
ಸಣ್ಣ ಕೈಗಾರಿಕೆ, ಮುಜರಾಯಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಅವರು ಉದ್ಘಾಟನೆ ನೆರವೇರಿಸಲಿದ್ದು, ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ಶಿವಕುಮಾರ ಉದಾಸಿ, ಪ್ರಹ್ಲಾದ ಜೋಶಿ, ಶಾಸಕರಾದ ಕೆ.ಬಿ. ಕೋಳಿವಾಡ, ಮನೋಹರ ತಹಶೀಲ್ದಾರ್, ಬಸವರಾಜ ಶಿವಣ್ಣನವರ, ಬಸವರಾಜ ಬೊಮ್ಮಾಯಿ, ಯು.ಬಿ. ಬಣಕಾರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ನಾಗರಾಜ ಛಬ್ಬಿ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ನಗರಸಭೆ ಅಧ್ಯಕ್ಷ ಐ.ಯು.ಪಠಾಣ, ಜಿಪಂ ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ನಗರಸಭೆ ಉಪಾಧ್ಯಕ್ಷೆ ರತ್ನಾ ಭೀಮಕ್ಕನವರ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜವ್ವ ಆಡಿನ, ತಾಪಂ ಅಧ್ಯಕ್ಷೆ ಲಕ್ಷ್ಮವ್ವ ಮೇಲ್ಮುರಿ ಹಾಗೂ ಉಪಾಧ್ಯಕ್ಷ ಪ್ರಕಾಶ ಬಣಕಾರ ಭಾಗವಹಿಸುವರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಹನುಮಂತಗೌಡ ಅವರು ಉಪನ್ಯಾಸಕರಾಗಿ ಭಾಗವಹಿಸಲಿದ್ದು, ಭಾಗ್ಯವತಿ ಬಿ. ಕೋಡಬಾಳ ಹಾಗೂ ತಂಡದವರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.