ಭೋವಿ ವಡ್ಡರ ಸಂಘದ ಪೂರ್ವಭಾವಿ ಸಭೆ ಇಂದು
ಹಾವೇರಿ: ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯುತ್ಸವವನ್ನು ಸರ್ಕಾರಿ ಕಾರ್ಯಕ್ರಮವಾಗಿ ಜ. 13ರಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಭಾನುವಾರ ಮಧ್ಯಾಹ್ನ 11 ಗಂಟೆಗೆ ನಗರದ ನಿರೀಕ್ಷಣಾ ಮಂದಿರದಲ್ಲಿ ಜಿಲ್ಲಾ ಭೋವಿ ವಡ್ಡರ ಸಮಾಜದ ಸಭೆ ಕರೆಯಲಾಗಿದೆ. ಬೋವಿ ವಡ್ಡರ ಸಮಾಜದ ಎಲ್ಲ ಹಿರಿಯರು, ನೌಕರರು, ಸಮಾಜ ಬಾಂಧವರು ಪಾಲ್ಗೊಂಡು ಸಲಹೆ-ಸೂಚನೆ ನೀಡಬೇಕು ಎಂದು ಸಮಾಜದ ಅಧ್ಯಕ್ಷ ರವಿ ಪೂಜಾರಿ ಕೋರಿದ್ದಾರೆ.
ಯುವ ದಿನಾಚರಣೆ, ಆರೋಗ್ಯ ಶಿಬಿರ ಇಂದು
ಬ್ಯಾಡಗಿ: ಸ್ವಾಮಿ ವಿವೇಕಾನಂದ ಅಭಿಮಾನಿಗಳ ವೇದಿಕೆ, ವಿವೇಕ ಜಾಗೃತ ಬಳಗ, ಎಸ್ಎಫ್ಐ ಮತ್ತು ಎಬಿವಿಪಿ ಆಶ್ರಯದಲ್ಲಿ ಜ. 12ರಂದು ಮುಂಜಾನೆ 10 ಗಂಟೆಗೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 1ರ ಆವರಣದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಎಸ್.ಆರ್. ಮಹಾರಾಜಪೇಟ ಸ್ಮರಣಾರ್ಥ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಅಕ್ಕಿಆಲೂರಿನ ವಿರಕ್ತಮಠದ ಶಿವಬಸವ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದು, ತಹಸೀಲ್ದಾರ್ ಶಿವಶಂಕರ ನಾಯಕ ಉದ್ಘಾಟಿಸುವರು. ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷೆ ಮಾಲತಿ ಸುಧೀರ, ಡಾ ಗಿರೀಶ ಕುಲಕರ್ಣಿ, ಡಾ ಜ್ಞಾನೇಂದ್ರ ಕುಮಾರ, ಡಾ ರೋಶನ್ ದೊಡ್ಮನಿ, ಡಾ ಶಿವಕುಮಾರ ಸುಣಗಾರ, ವೇದಿಕೆ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ, ಶಿವಕುಮಾರ ಹತ್ತಿಕಾಳ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಸಂಚಾಲಕ ಶಶಿಧರ ಗೊಲ್ಲರಹಳ್ಳಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋರಿ ಬೆದರಿಸುವ ಸ್ಪರ್ಧೆ
ಬ್ಯಾಡಗಿ: ಕಾರ್ತಿಕೋತ್ಸವದ ಅಂಗವಾಗಿ ಇರವಿ ಬಸವೇಶ್ವರ ಯುವಕ ಮಂಡಳದ ಆಶ್ರಯದಲ್ಲಿ ಜ. 22ರಂದು ಪಟ್ಟಣದ ಕನಕದಾಸ ಕಲಾಭವನದ ಬಳಿ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ನಡೆಯಲಿದೆ. ಉತ್ತಮವಾಗಿ ಓಡುವ ಹೋರಿಗಳಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಬೆಳಗ್ಗೆ 8ರಿಂದ ಸಂಜೆ 5 ಗಂಟೆ ವರೆಗೆ ಸ್ಪರ್ಧೆ ನಡೆಯಲಿದ್ದು, ಆಸಕ್ತರು ತಮ್ಮ ಹೋರಿಗಳೊಂದಿಗೆ ಪಾಲ್ಗೊಳ್ಳುವಂತೆ ಅಧ್ಯಕ್ಷ ಕರಬಸಯ್ಯ ಕಲ್ಮಠ ಹಾಗೂ ಕಾರ್ಯದರ್ಶಿ ಮಂಜುನಾಥ ಬಾರ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೇಮಕ
ಹಾವೇರಿ: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿಯನ್ನಾಗಿ ಇಲ್ಲಿಯ ಡಾ ಟಿಪ್ಪುಸಾಬ್ ಕಲಕೋಟಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ನಾಸಿರ್ ಅಹ್ಮದ್ ಈ ಆದೇಶ ಹೊರಡಿಸಿದ್ದು, ತಕ್ಷಣ ಜವಾಬ್ದಾರಿ ವಹಿಸಿಕೊಂಡು ಪಕ್ಷ ಸಂಘಟನೆ ಬಲಪಡಿಸಲು ಶ್ರಮಿಸುವಂತೆ ಟಿಪ್ಪುಸಾಬ್ ಅವರಿಗೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

