ಹಾವೇರಿ

ವಿವೇಕಾನಂದರ 151ನೇ ಜನ್ಮದಿನಾಚರಣೆ

Published On :

ಹಾನಗಲ್ಲ: ಸ್ವಾಮಿ ವಿವೇಕಾನಂದರ 151ನೇ ಜನ್ಮದಿನದ ಅಂಗವಾಗಿ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಸಾರ್ಧಶತ ಸಮಿತಿ ಮಾನವ ಸರಪಳಿ ಹಾಗೂ ಪುಷ್ಪಾರ್ಪಣೆ ಮೂಲಕ ವಿಶೇಷವಾಗಿ ಕಾರ್ಯಕ್ರಮ ಆಯೋಜಿಸಿತ್ತು.
ಭಾನುವಾರ ಬೆಳಗ್ಗೆ ಮಹಾತ್ಮಾ ಗಾಂಧಿ ವೃತ್ತದಲ್ಲಿ ಸ್ವಾಮೀ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಂಗಲ ಗೀತೆ ಹಾಗೂ ದೇಶಭಕ್ತಿ ಗೀತೆಗಳನ್ನು ಹಾಡಲಾಯಿತು.
ಹಾನಗಲ್ಲ ವಿವೇಕ ಜಾಗೃತ ಬಳಗದ ಸದಸ್ಯರು ಭಕ್ತಿ ಗೀತೆಗಳನ್ನು ಹಾಡಿದರು. ಪಿಎಸ್‌ಐ ಮಹದೇವ ಯಲಿಗಾರ, ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಾರುತಿ ಶಿಡ್ಲಾಪುರ, ಪುರಸಭೆ ಸದಸ್ಯ ಕಲ್ಯಾಣಕುಮಾರ ಶೆಟ್ಟರ, ರಾಜು ಹೈಬತ್ತಿ ವಿವೇಕಾನಂದರ ಕುರಿತು ಜೀವನ, ಸಾಧನೆ ಹಾಗೂ ಸಂದೇಶಗಳ ಕುರಿತು ಮಾತನಾಡಿದರು.
ಮಹಾತ್ಮಾ ಗಾಂಧಿ ವೃತ್ತದಲ್ಲಿ ಕಾರ್ಯಕರ್ತರಿಂದ ಮಾನವ ಸರಪಳಿ ಕಾರ್ಯಕ್ರಮ ಏರ್ಪಟ್ಟು, ದೇಶಭಕ್ತಿಯ ಘೋಷಣೆಗಳನ್ನು ಕೂಗಿದರು. ಚೇತನ್ ಬೆಳಗಲಿ, ಪ್ರಶಾಂತ ಕಂಕಾಳೆ, ಸಂಜಯ ಬೇದ್ರೆ, ವಿನಾಯಕ ಬಂಕನಾಳ, ಚೈತನ್ಯ ತುಪ್ಪದ, ರವಿ ಪುರೋಹಿತ, ನಾಗೇಶ ಜೋಗಳೇಕರ, ಕೃಷ್ಣ ಪೂಜಾರ, ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.