ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ ವೀರಸನ್ಯಾಸಿ: ಮುಳ್ಳೂರ
ಹಾವೇರಿ: ಭಾರತೀಯ ಸಂಸ್ಕೃತಿ, ಪರಂಪರೆಯನ್ನು ವಿದೇಶಗಳಲ್ಲಿ ಅತ್ಯಂತ ಪ್ರಭಾವಯುತವಾಗಿ ಪ್ರಚಾರ ಮಾಡಿದವರು ಹಾಗೂ ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ ಮಹಾ ಸನ್ಯಾಸಿ ಸ್ವಾಮಿ ವಿವೇಕಾನಂದರು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರದೀಪ ಮುಳ್ಳೂರ ಶ್ಲಾಘಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಯುವ ಮೋರ್ಚಾ ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 151ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು. ವಿವೇಕಾನಂದರ ತತ್ವಾದರ್ಶಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಬಿಜೆಪಿ ಯುವ ಮೋರ್ಚಾ ಘಟಕ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಾಂತ ಕ್ರಿಕೆಟ್ ಪಂದ್ಯಾವಳಿಗಳನ್ನು ಹಮ್ಮಿಕೊಂಡು ದೇಶದ ಯುವ ಜನತೆ ಒಂದಾಗುವಂತೆ ಪ್ರೇರೇಪಿಸಿದೆ.
ಸುಭದ್ರ ದೇಶವನ್ನು ಕಟ್ಟುವಲ್ಲಿ ಯುವಕರು ಪ್ರಮುಖ ಪಾತ್ರ ವಹಿಸಬೇಕೆಂಬ ಆಸೆ ಬಿಜೆಪಿಯದು. ಯುವ ಜನತೆ ಅತ್ಯಂತ ಶ್ರೇಷ್ಠವಾದ ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಂಡು ಉನ್ನತ ಮಾರ್ಗದಲ್ಲಿ ನಡೆದು, ಭವಿಷ್ಯ ಬೆಳಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸೋಮೇಶ್ವರ ಕುರ್ಡೇಕರ, ವೆಂಕಟೇಶ ದೈವಜ್ಞ, ಮಧುಕರ ನೌಲೆ, ಹುಸೇನಸಾಬ ನದಾಫ್, ಇಮಾಮಸಾಬ ಹಿರೇಮುಗದೂರ, ಅಚ್ಯುತ್ ಹೆಸರೂರ, ಪ್ರಕಾಶ ಉಜನಿಕೊಪ್ಪ, ರವಿರಾಜ ಹಾದಿಮನಿ, ಅಶೋಕ ಹನುಮನಹಳ್ಳಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

