ಹಾವೇರಿ

ಸಂಕ್ರಾಂತಿ ಸಡಗರ

Published On :

ಹಾವೇರಿ: ಜಿಲ್ಲೆಯಾದ್ಯಂತ ಮಂಗಳವಾರ ಸಂಕ್ರಾಂತಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಹಲವರು ಕುಟುಂಬ ಸಮೇತ ಪ್ರೇಕ್ಷಣೀಯ ಹಾಗೂ ಧಾರ್ಮಿಕ ಸ್ಥಳಗಳಿಗೆ ಹೋಗಿ ಪುಣ್ಯಸ್ನಾನ ಮಾಡಿದರು. ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಎಳ್ಳು-ಬೆಲ್ಲ ನೀಡಿ ಶುಭಾಶಯ ಕೋರಿದರು. ಅಲ್ಲಿಯೇ ಭೋಜನ ಮಾಡಿ ಸಂಭ್ರಮಿಸಿದರು.
ತಾಲೂಕಿನ ಗುತ್ತಲ ಬಳಿ ಚೌಡದಾನಪುರದ ತುಂಗಾ ತೀರದಲ್ಲಿ, ಕರ್ಜಗಿ ಬಳಿಯ ವರದಾ ನದಿಯಲ್ಲಿ, ವರದಾ ಹಾಗೂ ಧರ್ಮಾ ನದಿ ಸಂಗಮದ ಕೂಡಲದಲ್ಲಿ, ಶಿಗ್ಗಾಂವಿ ತಾಲೂಕಿನ ದಕ್ಷಿಣಕಾಶಿ ಗಂಗಿಬಾವಿಯಲ್ಲಿ, ಹಿರೇಕೆರೂರು ತಾಲೂಕಿನ ಮದಗ ಮಾಸೂರು ಕೆರೆಯಲ್ಲಿ, ಹಿರೇಕೆರೂರಿನ ದುರ್ಗಾದೇವಿ ಕೆರೆಯಲ್ಲಿ ಸಾವಿರಾರು ಜನರು ಮಕರ ಸಂಕ್ರಮಣದ ಅಂಗವಾಗಿ ಪುಣ್ಯಸ್ನಾನ ಮಾಡಿದರು.
ಇನ್ನು ಕೆಲವರು ಬ್ಯಾಡಗಿ ತಾಲೂಕು ಕದರಮಂಡಲಗಿ, ಕಾಗಿನೆಲೆ, ದೇವರಗುಡ್ಡ, ಶಿಶುವಿನಹಾಳ ಶರೀಫ ದೇವಸ್ಥಾನ, ಹಾವನೂರ ಗ್ರಾಮದೇವತೆ, ಕಾರಡಗಿ ವೀರಭದ್ರೇಶ್ವರ ದೇವಸ್ಥಾನ, ಹಿರೇಕೆರೂರಿನ ದುರ್ಗಾದೇವಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಆವರಣ, ನದಿ ತೀರ ಹಾಗೂ ಪ್ರೇಕ್ಷಣೀಯ ಸ್ಥಳದಲ್ಲೇ ಸಹಭೋಜನ ಮಾಡಿ, ಸಂಭ್ರಮಿಸಿದರು.
ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಉದ್ಯಾನವನದಲ್ಲಿ ಸಾವಿರಾರು ಜನರು ಎಳ್ಳು-ಬೆಲ್ಲ ವಿತರಿಸಿ, ಸಂಕ್ರಮಣ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಯಿಂದ ತಂದಿದ್ದ ರೊಟ್ಟಿ, ವಿವಿಧ ಬಗೆಯ ಪಲ್ಯ, ಚಟ್ನಿ, ಸಿಹಿ ತಿಂಡಿಗಳ ಭೋಜನ ಸವಿದರು. ಶಾಲಾ ಕಾಲೇಜುಗಳಿಗೆ ರಜೆ ಇದ್ದುದರಿಂದ ಮಕ್ಕಳು, ಮಹಿಳೆಯರು ಸೇರಿ ಉತ್ತರಾಯಣವನ್ನು ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.