ಹಾವೇರಿ

ಇಂದು ಶ್ರದ್ಧಾಂಜಲಿ ಸಭೆ

Published On :

ಹಿರೇಕೆರೂರು: ಪುಟ್ಟಮ್ಮ ಚಂದ್ರಶೇಖರಯ್ಯ ಕಬ್ಬಿಣಕಂಥಿಮಠ ನಿಧನರಾಗಿರುವ ಪ್ರಯುಕ್ತ  ತಾಲೂಕಿನ ರಟ್ಟಿಹಳ್ಳಿ ಕಬ್ಬಿಣಕಂಥಿಮಠದ ಶ್ರೀ ಸಿದ್ದಲಿಂಗೇಶ್ವರ ಸಮುದಾಯ ಭವನದಲ್ಲಿ ಜ. 16ರಂದು ಬೆಳಗ್ಗೆ 10.30 ಗಂಟೆಗೆ ಕೈಲಾಸ ಸಮಾರಾಧನೆ ಮತ್ತು ಶ್ರದ್ಧಾಂಜಲಿ ಸಭೆ ಜರುಗಲಿದೆ. ಶಾಸಕ ಯು.ಬಿ. ಬಣಕಾರ ಅಧ್ಯಕ್ಷತೆ ವಹಿಸುವರು. ಕಾಳೇನಹಳ್ಳಿ ಮಠಾಧೀಶ ರೇವಣಸಿದ್ದ ಸ್ವಾಮೀಜಿ, ತಿಪ್ಪಾಯಿಕೊಪ್ಪದ ವಿರೂಪಾಕ್ಷ ಸ್ವಾಮೀಜಿ, ಲಿಂಗದಳ್ಳಿ ವೀರಭದ್ರ ಸ್ವಾಮೀಜಿ, ಬೆಂಗಳೂರಿನ ಸರ್ಪಭೂಷಣ ಮಠದ ಮಲ್ಲಿಕಾರ್ಜುನ ದೇವರು ಹಾಗೂ ರಟ್ಟಿಹಳ್ಳಿ ಕಬ್ಬಿಣಕಂಥಿಮಠದ ಮಠಾಧೀಶ ಶಿವಲಿಂಗ ಶಿವಾಚಾರ್ಯ ಸಾನ್ನಿಧ್ಯ ವಹಿಸುವರು.
ಅಂಗನವಾಡಿ ಹುದ್ದೆಗೆ ಆಹ್ವಾನ
ರಾಣಿಬೆನ್ನೂರು:  ತಾಲೂಕಿನ 4 ಗ್ರಾಪಂ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಹಾಗೂ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೋಟಿಹಾಳ ಗ್ರಾಪಂ ವ್ಯಾಪ್ತಿಯ ನಿಟಪಳ್ಳಿ ಗ್ರಾಮದ 2ನೇ ಹಾಗೂ ಬೆನಕನಕೊಂಡ ಗ್ರಾಪಂ ವ್ಯಾಪ್ತಿಯ ಕುಸಗೂರು ಗ್ರಾಮದ 1ನೇ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯರ ಹುದ್ದೆಗಳು ಖಾಲಿಯಿವೆ. ಸುಣಕಲ್ಲಬಿದರಿ ಗ್ರಾಮದ 3ನೇ ಹಾಗೂ ಚಿಕ್ಕಕುರುವತ್ತಿ ಗ್ರಾಮದ 2ನೇ ಅಂಗನವಾಡಿಯ ಸಹಾಯಕಿಯರ ಹುದ್ದೆಗಳು ಖಾಲಿಯಾಗಿವೆ. ಗೌರವಧನ ಆಧಾರದಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಸಹಾಯಕಿ ಹುದ್ದೆಗೆ ವಿದ್ಯಾರ್ಹತೆ 4ನೇ ತರಗತಿ. ವಯೋವುತಿ 18ರಿಂದ 44 ವರ್ಷ. ಆಯಾ ಗ್ರಾಮದ ನಿವಾಸಿಗಳಾಗಿರುವುದು ಕಡ್ಡಾಯ. ವಿಧವೆಯರು ಹಾಗೂ ಅಂಗವಿಕಲರಿಗೆ ಆದ್ಯತೆ ಇದೆ. ಭರ್ತಿ ಮಾಡಿದ ಅರ್ಜಿಯನ್ನು ರಹವಾಸಿ ಪ್ರಮಾಣ ಪತ್ರ, ಜನನ, ವಾಸಸ್ಥಳ, ವಿಧವೆ ಅಥವಾ ಅಂಗವಿಕಲರಾಗಿದ್ದಲ್ಲಿ ಪ್ರಮಾಣಪತ್ರ, ಶಾಲೆಯ ಅಂಕಪಟ್ಟಿ ಇತ್ಯಾದಿ ದಾಖಲೆಗಳೊಂದಿಗೆ ಜ. 25ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಣಿಬೆನ್ನೂರು - ಇಲ್ಲಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.