ಜವಳಿ ಕ್ಷೇತ್ರದ ಅಭಿವೃದ್ಧಿಗೆ ರು. 1 ಸಾವಿರ ಕೋಟಿ: ಬಾಬುರಾವ್ ಚಿಂಚನಸೂರ್
ಹಾವೇರಿ: ಜವಳಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ನೂತನ ಜವಳಿ ನೀತಿ ಘೋಷಿಸಿದ್ದು, 5 ವರ್ಷಗಳ ಅವಧಿಯಲ್ಲಿ 1 ಸಾವಿರ ಕೋಟಿ ಹಂಚಿಕೆ ಮಾಡಿ ಅನುಷ್ಠಾನಗೊಳಿಸುತ್ತಿದೆ. ಈ ಅವಧಿಯಲ್ಲಿ 5 ಲಕ್ಷ ಜನರಿಗೆ ಉದ್ಯೋಗಾವಕಾಶ ಒದಗಿಸುವ ಗುರಿ ಹೊಂದಲಾಗಿದೆ ಎಂದು ಜವಳಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಬಾಬುರಾವ್ ಚಿಂಚನಸೂರ್ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಉದ್ಯಮಗಳಿಗೆ ಬೇಕಾಗುವ ಮಾನವ ಸಂಪನ್ಮೂಲ ಮತ್ತು ಕೌಶಲ್ಯಾಭಿವೃದ್ಧಿಗಾಗಿ ಸಿದ್ಧ ಉಡುಪ ತಯಾರಿಕೆ, ಕೈಮಗ್ಗ ನೇಯ್ಗೆ, ವಿದ್ಯುತ್ ಮಗ್ಗ ನೇಯ್ಗೆ, ಎಂಬ್ರಾಯ್ಡರಿ, ಕಸೂತಿ ಮುಂತಾದ ವೃತ್ತಿಗಳಲ್ಲಿ 209 ಸಾವಿರ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದ್ದು, 10 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಬಂದರು ಅಭಿವೃದ್ಧಿ: ಕಾರವಾರ ಬಂದರಿನ 2ನೇ ಹಂತದ ಅಭಿವೃದ್ಧಿ ಯೋಜನೆಯನ್ನು ರು. 1500 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಆಸಕ್ತ ಹೂಡಿಕೆದಾರರಿಗೆ ಬಿಡ್ ದಾಖಲೆ ನೀಡುವ ಪ್ರಕ್ರಿಯೆ ಸಕಾರದ ಪರಿಶೀಲನೆಯಲ್ಲಿದೆ. ಹೊನ್ನಾವರ, ಮಂಕಿ, ಪಾವಿನಕುರ್ವಾ, ಹಳದಿಪುರ, ತದಡಿ, ಮಂಗಳೂರು ಬಂದರುಗಳನ್ನು ಅಭಿವೃದ್ಧಿಪಡಿಸುವ ಯೋಜನೆ ವಿವಿಧ ಹಂತದಲ್ಲಿದೆ. ಕರಾವಳಿ ಜಿಲ್ಲೆಗಳಲ್ಲಿ ಸಮುದ್ರ ಕೊರೆತ ತಡೆಗೋಡೆ ಕಾಮಗಾರಿಗೆ ರು. 14.68 ಕೋಟಿ, ಕರಾವಳಿ ಸಂರಕ್ಷಣಾ ಮತ್ತು ನಿರ್ವಹಣಾ ಯೋಜನಾ ಕಾಮಗಾರಿಯನ್ನು ಎಡಿಬಿ ನೆರವಿನಲ್ಲಿ ರು. 911 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಸರ್ಕಾರದ ಮಂಜೂರಾತಿ ದೊರೆತಿದೆ. ಇದನ್ನು 3 ಹಂತಗಳಲ್ಲಿ 8 ವರ್ಷಗಳ ಅವಧಿಯಲ್ಲಿ ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಚಿಂಚನಸೂರ್ ತಿಳಿಸಿದರು. ಶಾಸಕ ರುದ್ರಪ್ಪ ಲಮಾಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

