ಸಂಘ ಶಕ್ತಿಯಲ್ಲಿ ವಿಶ್ವಾಸವಿಟ್ಟರೆ ಯಶಸ್ಸು
ಹಾನಗಲ್ಲ: ಸಂಘ ಶಕ್ತಿಯಲ್ಲಿ ಯುವ ನಾಯಕರು ವಿಶ್ವಾಸವಿಟ್ಟು ಶಕ್ತಿಯುತವಾಗಿ ಬೆಳೆಯುವ ಅಗತ್ಯವಿದೆ. ಸಮಯ ಪ್ರಜ್ಞೆ, ಕಾರ್ಯದ ಬದ್ಧತೆ, ಅಚಲ ವಿಶ್ವಾಸಗಳಿಂದ ಮಾತ್ರ ಯಶಸ್ಸು ಸಾಧ್ಯ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಕರೆ ನೀಡಿದರು.
ಗುರುವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದಿಂದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 57ನೇ ಮತ್ತು ನಾಡಚೇತನ ಬಿ. ಬಸಲಿಂಗಪ್ಪನವರ 21ನೇ ಪರಿನಿರ್ಮಾಣದ ಅಂಗವಾಗಿ ತಾಲೂಕಿನ ಮಾವಕೊಪ್ಪ ಬಳಿ ಇರುವ ಭೂತೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ ವಿಚಾರ ಸಂಕಿರಣ ಮತ್ತು ದಲಿತ ಸಾಂಸ್ಕೃತಿಕ ವೈಭವ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ದಲಿತರ ಹಕ್ಕಿಗಾಗಿ ಹೋರಾಡಿದ ಮಹಾನ್ ಚೇತನ ಅಂಬೇಡ್ಕರ್ ಅವರನ್ನು ಹೃದಯದಲ್ಲಿಟ್ಟು ಪೂಜಿಸುವಂತರಾಗಬೇಕು. ಅವರ ಆದರ್ಶ, ತತ್ವ, ಅಳವಡಿಸಿಕೊಳ್ಳಬೇಕಾಗಿದೆ. ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗುವುದನ್ನು ಸಂಘಟನೆಯ ಮೂಲಕ ತಡೆಗಟ್ಟುವ ಪ್ರಯತ್ನ ಮಾಡಬೇಕು ಎಂದರು.
ಕೆಪಿಸಿಸಿ ಸದಸ್ಯ ರಾಜಶೇಖರ ಸಾಲಿಮಠ ಅವರು ಸಾಮ್ರಾಟ್ ಚಂದ್ರಗುಪ್ತ ಮೌರ್ಯ ಮಹಾವೇದಿಕೆ ಉದ್ಘಾಟಿಸಿ ಮಾತನಾಡಿ, ಒಂದು ಕಾಲದಲ್ಲಿ ದಲಿತ ಸಮುದಾಯ ಕತ್ತಲೆಯಲ್ಲಿತ್ತು. ಬಾಬಾ ಸಾಹೇಬ್ ಅಂಬೇಡ್ಕರರು ದಲಿತರರಿಗಾಗಿ ರಚಿಸಿದ ಕಾನೂನನ್ನು ಇಂದಿರಾಗಾಂಧಿ ಅವರು ಜಾರಿಗೆ ತಂದು, ದಲಿತರನ್ನು ಕತ್ತಲಿನಿಂದ ಬೆಳಕಿನೆಡೆಗೆ ತರಲು ಶ್ರಮಿಸಿದರು ಎಂದರು.
ಹುಬ್ಬಳ್ಳಿಯ ಅಖಿಲ ಕರ್ನಾಟಕ ಬೌದ್ಧ ಮಹಾಸಭಾದ ಗೌರವಾಧ್ಯಕ್ಷ ಪಿತಾಂಬ್ರಪ್ಪ ಬಿಳ್ಳಾರ ಅಧ್ಯಕ್ಷತೆ ವಹಿಸಿದ್ದರು. ಹಾವೇರಿ ಜಿಲ್ಲಾ ಡಿಎಸ್ಎಸ್ ಸಂಚಾಲಕ ನಿಂಗಪ್ಪ ಗಾಳೆಮ್ಮನವರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಹಾಗೂ ನ್ಯಾಯವಾದಿ ಚಂದ್ರಶೇಖರ ಮುದುಕಣ್ಣನವರ, ನಾಗಪ್ಪ ಹಂಚಿನಮನಿ, ಸುರೇಶ ದೊಡ್ಡಕುರುಬರ, ಎಸ್.ಎಚ್. ಗಜಾಕೋಶ, ಮಾಲತೇಶ ಸರ್ವಿಕೇರಿ, ಮಂಜುನಾಥ ಮಲಗುಂದ, ಹನೀಫ್ಸಾಬ್ ಹಾವೇರಿ, ಅಜೀಜ್ಖಾನ್ ಆದಂಖಾನನವರ, ದಲಿತ ಸಂಘರ್ಷ ಸಮಿತಿ ಸದಸ್ಯರು ಇದ್ದರು. ನಿಂಗಪ್ಪ ಕಾಳೇರ ಸ್ವಾಗತಿಸಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

