ಆಮ್ ಆದ್ಮಿ ಸದಸ್ಯತ್ವಕ್ಕೆ ಆಹ್ವಾನ
ಹಾವೇರಿ: ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣಕ್ಕಾಗಿ ನಿಷ್ಠಾವಂತ ಹಾಗೂ ಮುಗ್ಧ ರಾಜಕಾರಣಿಗಳು ಪಕ್ಷದ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕ ಮನವಿ ಮಾಡಿದೆ. ಜಿಲ್ಲೆಯಲ್ಲಿ ವಿವಿಧ ಪಕ್ಷಗಳಲ್ಲಿ ನಿಷ್ಠಾವಂತ ರಾಜಕಾರಣಿಗಳಿದ್ದಾರೆ. ಆದರೆ, ಉತ್ತಮ ರಾಜಕಾರಣಿಗಳನ್ನು ಮೂಲೆಗುಂಪು ಮಾಡಲಾಗಿದೆ. ಭ್ರಷ್ಟಾಚಾರದ ದುಡ್ಡಿನಿಂದ ಅಂಥ ಮುಗ್ಧ ರಾಜಕಾರಣಿಗಳನ್ನು ಹಿಂದಿಕ್ಕಿದವರಿದ್ದಾರೆ. ಆದ್ದರಿಂದ ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣ ಆಮ್ ಆದ್ಮಿ ಪಕ್ಷದ ಮುಖ್ಯ ಗುರಿಯಾಗಿದೆ. ಹೀಗಾಗಿ, ಜಿಲ್ಲೆಯ ನಿಷ್ಠಾವಂತ, ಭ್ರಷ್ಟ ರಾಜಕೀಯ ವ್ಯವಸ್ಥೆ ವಿರೋಧಿಸುವಂಥವರು ಆಪ್ ಸೇರಿಕೊಳ್ಳಲು ಸದಸ್ಯತ್ವ ಪಡೆದುಕೊಳ್ಳಬೇಕು. ಜತೆಗೆ ನಿಷ್ಠಾವಂತ ರಾಜಕಾರಣ ಮುಂದುವರಿಸಲು ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಪಕ್ಷದ ಮುಖಂಡರಾದ ಅರಳಹಳ್ಳಿ ಲಿಂಗನಗೌಡ್ರ ಮನವಿ ಮಾಡಿದ್ದಾರೆ. ಸದಸ್ಯತ್ವ ಪಡೆಯಲು ಅರಳಹಳ್ಳಿ ಲಿಂಗನಗೌಡ್ರ 9844326884, ಅಮರನಾಥ ಭೂತೆ 9986418119ಗೆ ಸಂಪರ್ಕಿಸಲು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

