ಫೆ. 3ರಂದು ಕೃಷಿಮೇಳ
ಬ್ಯಾಡಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಫೆ. 3ರಂದು ತಾಲೂಕು ಕ್ರೀಡಾಂಗಣದಲ್ಲಿ ಕೃಷಿಮೇಳ ಆಯೋಜಿಸಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು. ಕೃಷಿ ತಂತ್ರಜ್ಞಾನ ರೈತರಿಗೆ ತಲುಪಿಸುವ ಉದ್ದೇಶದಿಂದ ನಡೆಸುವ ಮೇಳವನ್ನು ಕೃಷಿ ಸಚಿವ ಕೃಷ್ಣ ಭೈರೇಗೌಡ ಹಾಗೂ ಉಸ್ತುವಾರಿ ಸಚಿವ ಪ್ರಕಾಶ್ ಹುಕ್ಕೇರಿ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗುವುದು ಎಂದರು. ಯೋಜನಾಧಿಕಾರಿ ಗಣೇಶ್ ಮರಾಠೆ, ಮೇಳದಲ್ಲಿ ಮಾರಾಟ ಮಳಿಗೆ, ಜಾನುವಾರು ಪ್ರದರ್ಶನ ಹಾಗೂ ನಾಲ್ಕು ಗೋಷ್ಠಿ ನಡೆಸಲಾಗುವುದು. ಸಾಧಕ ರೈತರನ್ನು ಸನ್ಮಾನಿಸಲಾಗುವುದು ಎಂದರು. ಎಚ್.ಎಚ್. ದೊಡ್ಮನಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಸಿ. ಶಿಡೇನೂರ, ಸದಸ್ಯರಾದ ವಿರೂಪಾಕ್ಷಪ್ಪ ಬಳ್ಳಾರಿ, ಶಂಕ್ರಣ್ಣ ಮಾತನವರ, ಎಪಿಎಂಸಿ ಅಧ್ಯಕ್ಷ ರವೀಂದ್ರ ಪಟ್ಟಣಶೆಟ್ಟಿ, ಸದಸ್ಯ ರಮೇಶ ಸುತ್ತಕೋಟಿ, ಪುರಸಭೆ ಸದಸ್ಯರಾದ ಮುರಿಗೆಪ್ಪ ಶೆಟ್ಟರ, ಪ್ರಶಾಂತ್ ಯಾದವಾಡ, ಕೃಷಿಕ ಸಮಾಜದ ಅಧ್ಯಕ್ಷ ಗಂಗಣ್ಣ ಎಲಿ, ಸದಸ್ಯ ಬಸವರಾಜ ಸಂಕಣ್ಣನವರ, ಹನುಮಂತಪ್ಪ ಮಾಗೋಡ, ತಹಸೀಲ್ದಾರ್ ಶಿವಶಂಕರ ನಾಯಕ್, ಟಿಇಓ ಎಸ್.ಆರ್. ಪಾಟೀಲ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಎಚ್. ನಟರಾಜ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಚಿದಾನಂದ, ಮುಖ್ಯಾಧಿಕಾರಿ ವಿರೇಶಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನಕುಮಾರ ಇದ್ದರು. ಕೆ. ನಾರಾಯಣ ಸ್ವಾಗತಿಸಿದರು. ಮುತ್ತಕ್ಕ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

