ಹಾವೇರಿ

ವಿವೇಕಾನಂದರ ಕನಸು ನನಸಾಗಿಸಿ: ರವಿಕುಮಾರಜಿ

Published On :

ಹಾವೇರಿ: ಯುವಕರು ಎಚ್ಚೆತ್ತು ದೇಶದ ಅಭಿವೃದ್ಧಿಗಾಗಿ ಸ್ವಾತಂತ್ರ್ಯ, ಸಂಸ್ಕಾರ ಮತ್ತು ಸಂಸ್ಕೃತಿ ಉಳಿಸಿಕೊಳ್ಳಬೇಕು. ವಿವೇಕಾನಂದರ ಕನಸು ನನಸಾಗಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದಕ್ಷಿಣ ಭಾರತ ಸಂಘಟನಾ ಕಾರ್ಯದರ್ಶಿ ಎನ್. ರವಿಕುಮಾರಜಿ ಕರೆ ನೀಡಿದರು. ಸ್ವಾಮಿ ವಿವೇಕಾನಂದರ 151ನೇ ಜಯಂತ್ಯುತ್ಸವದ ಅಂಗವಾಗಿ ಎಬಿವಿಪಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶ ಬದಲಾವಣೆಯನ್ನು ಬಯಸುತ್ತಿದೆ. ಇದನ್ನು ಯುವಕರು ಸಾಧ್ಯವಾಗಿಸಬೇಕು ಎಂದರು. ತಹಸೀಲ್ದಾರ್ ಪಂಪನಗೌಡ ಮೇಲ್ಸೀಮೆ ಉದ್ಘಾಟಿಸಿದರು. ಹಾವೇರಿ ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ರಾಣಿಬೆನ್ನೂರು ರಾಮಕೃಷ್ಣಾಶ್ರಮದ ಪ್ರಕಾಶಾನಂದಜಿ ಅಧ್ಯಕ್ಷತೆ ವಹಿಸಿದ್ದರು. ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ದು ಮದರಖಂಡಿ ಪ್ರಾಸ್ತವಿಕವಾಗಿ ಮಾತನಾಡಿದರು. ಸುದೀಪ್ ಎಸ್. ಪಂಡಿತ್, ಪ್ರಮೋದ್, ದೀಪಕ್ ಹೆಬ್ಬಾರೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.