ನಾಳೆ ಭಾವೈಕ್ಯ ಮಕ್ಕಳ ಮೇಳ
ಹಾವೇರಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಾವೇರಿ ತಾಲೂಕು ಮಟ್ಟದ ಭಾರತ ಸೇವಾದಳ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳವನ್ನು ಜ. 20ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಪೂರ್ವಸಿದ್ಧತೆಗೆ ಭಾರತ ಸೇವಾದಳ ತಂಡಗಳಿರುವ ಶಾಲೆಗಳ ಶಿಕ್ಷಕರು ಮಕ್ಕಳನ್ನು ತರಬೇತಿಗೊಳಿಸಿ ಸೇವಾದಳದ ಸಂಪೂರ್ಣ ಸಮವಸ್ತ್ರದೊಂದಿಗೆ ಶಿಕ್ಷಕರು ಹಾಗೂ ಮಕ್ಕಳು ಅಂದು ಬೆಳಗ್ಗೆ 9 ಗಂಟೆಗೆ ಹಾವೇರಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಹಾಜರಾಗಬೇಕು. ರ್ಯಾಲಿ ಮೂಲಕ ನಗರ ಕ್ರೀಡಾಂಗಣಕ್ಕೆ ಬಂದು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ, ಪಥಸಂಚಲನ ಸ್ಪರ್ಧೆ ಹಾಗೂ ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಸಾಮೂಹಿಕ ಕವಾಯತ್ ಪ್ರದರ್ಶನ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರು ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳವನ್ನು ಯಶಸ್ವಿಗೊಳಿಸಲು ಕೋರಲಾಗಿದೆ. ರ್ಯಾಲಿಯನ್ನು ಶಾಸಕ ರುದ್ರಪ್ಪ ಎಂ. ಲಮಾಣಿ ಉದ್ಘಾಟಿಸಲಿದ್ದು, ಕಾರ್ಯಕ್ರಮ ಶಿಸ್ತಿನಿಂದ ನಡೆಸಲು ಹಾಗೂ ಭಾರತ ಸೇವಾದಳ ತರಬೇತಿ ಪಡೆದ ಶಿಕ್ಷಕರು ಗೈರುಹಾಜರಾಗದೆ ಪಾಲ್ಗೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

