ಹಾವೇರಿ

ಖಾತ್ರಿಯಿಂದ ರು. 1310 ಕೋಟಿ ಬಳಕೆ: ಎಚ್.ಕೆ.ಪಾಟೀಲ್

Published On :

ಹಾವೇರಿ: ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ರೂಪಿಸಿರುವ 15 ಚಟುವಟಿಕೆ ಕೈಗೊಳ್ಳಲಾಗಿದ್ದು, ಇದುವರೆಗೆ 1310 ಕೋಟಿ ಬಿಡುಗಡೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಹೇಳಿದರು. ಸವಣೂರು ತಾಲೂಕಿನ ಯಲವಿಗಿಯಲ್ಲಿ ಸೋಮವಾರ ಗ್ರಾಪಂ ನೂತನ ಕಟ್ಟಡ, ಗ್ರಾಮಸಭೆ ನೇರ ಪ್ರಸಾರ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಸುದ್ದಿಗಾರರ ಜತೆ ಮಾತನಾಡಿದರು. 6 ತಿಂಗಳಲ್ಲಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಲಾಗಿದೆ. ಹಳ್ಳಿ ಜನರ ನೈಜ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮೂಲಸೌಲಭ್ಯ ಕಲ್ಪಿಸುವ ಕಾಮಗಾರಿ ನಿರ್ವಹಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಂಚಿಕೆಯಾಗಿದ್ದ 2220 ಕೋಟಿ ಪೈಕಿ 1310 ಕೋಟಿ ಅನುದಾನ ಬಿಡುಗಡೆಯಾಗಿದ್ದು, ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದರು.
6 ಲಕ್ಷ ಶೌಚಾಲಯ ಗುರಿ: ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಇಲಾಖೆಯಿಂದ 6 ಲಕ್ಷ ಶೌಚಾಲಯ ನಿರ್ಮಿಸುವ ಗುರಿ ಹೊಂದಲಾಗಿತ್ತು. ಈ ಪೈಕಿ ಈಗಾಗಲೇ 3.22 ಲಕ್ಷ ಶೌಚಾಲಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಸಾರ್ವಜನಿಕರು ಶೌಚಾಲಯ ನಿರ್ಮಿಸಿಕೊಳ್ಳಲು ಆಸಕ್ತಿ ವಹಿಸಿದ್ದು, 6.29 ಲಕ್ಷ ಅರ್ಜಿಗಳು ಬಂದಿವೆ. ಉಳಿದ 2 ತಿಂಗಳಲ್ಲಿ ಗುರಿ ಮೀರಿದ ಸಾಧನೆ ಆಗಲಿದೆ. 8 ಲಕ್ಷ ಶೌಚಾಲಯ ನಿರ್ಮಾಣವಾಗುವ ಸಾಧ್ಯತೆಯಿದೆ. ಇದು ಸಾಧ್ಯವಾದರೆ ರಾಷ್ಟ್ರಮಟ್ಟದ ದಾಖಲೆ. ಹಿಂದುಳಿದ ಕೊಪ್ಪಳ ಜಿಲ್ಲೆಯೊಂದರಲ್ಲೇ 1 ಲಕ್ಷ ಶೌಚಾಲಯ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಶೇ. 40ರಷ್ಟು ಸಾಧನೆಯಾಗಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.