ವಿಚಾರ ಸಂಕಿರಣ ತೆರೆದ ಪುಸ್ತಕವಿದ್ದಂತೆ: ಚರಂತಿಮಠ
ಕನ್ನಡಪ್ರಭ ವಾರ್ತೆ, ಹಾವೇರಿ, ಜ. 26
ವಿಚಾರ ಸಂಕಿರಣಗಳು ವಿಚಾರವಂತರಿಗೆ ತೆರೆದ ಪುಸ್ತಕವಿದ್ದಂತೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಮತ್ತು ಸಂಶೋಧಕರ ಕಾರ್ಯ ಚಟುವಟಿಕೆಗೆ ಸಹಕಾರಿ. ಇವು ಜ್ಞಾನದ ಮಟ್ಟ ಹೆಚ್ಚಿಸುವ ಜತೆಗೆ ಕ್ರಿಯಾಶೀಲತೆಗೂ ಕಾರಣವಾಗುತ್ತವೆ ಎಂದು ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ ಸದಸ್ಯ ಡಾ ಎನ್.ಎ. ಚರಂತಿಮಠ ಹೇಳಿದರು.
ನಗರದ ಕೆಎಲ್ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಕಾಲೇಜಿನ ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಭಾಗಗಳ ಆಶ್ರಯದಲ್ಲಿ ಜರುಗಿದ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಿರಂತರ ಅಧ್ಯಯನ ಮತ್ತು ಸತತ ಪ್ರಯತ್ನದಿಂದ ವಿದ್ಯಾರ್ಥಿಗಳು ಯಶಸ್ಸಿನ ಮೆಟ್ಟಿಲನ್ನು ಏರಬಹುದು. ಅಭಿವ್ಯಕ್ತಿಯನ್ನು ರೂಪಿಸಿಕೊಂಡು ಅಂತಃಶಕ್ತಿಯ ಮೂಲಕವಾಗಿ ಗಣನೀಯ ಪ್ರಮಾಣದಲ್ಲಿ ಸಾಮಾಜಿಕವಾಗಿ ಸಬಲಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ವಿಶೇಷ ಆಹ್ವಾನಿತರಾಗಿದ್ದ ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಕುಸಿಯುತ್ತಿರುವ ರುಪಾಯಿ ಮೌಲ್ಯವನ್ನು ಹೇಗೆ ಹೆಚ್ಚಿಸಬೇಕು ಮತ್ತು ಸಮಮಟ್ಟ ಕಾಯ್ದುಕೊಳ್ಳಬೇಕು ಎಂಬ ಬಗ್ಗೆ ಆರ್ಥಿಕ ತಜ್ಞರು ಸಮರ್ಥ ನಿರ್ಧಾರಗಳನ್ನು ಕೈಗೊಂಡು ಭಾರತ ಆರ್ಥಿಕ ಸಂಕಷ್ಟದಿಂದ ಪಾರಾಗಲು ನೆರವಾಗಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎ. ಹುದ್ದಾರ ಮಾತನಾಡಿ, ಆರ್ಥಿಕ ಮತ್ತು ರಾಜಕೀಯ ವಲಯಗಳ ಹಲವು ಸಾಮ್ಯಗಳನ್ನು ಸಾಮಾನ್ಯರು ಅರಿತು ಮಾನವ ಹಕ್ಕುಗಳ ಕುರಿತು ಜಾಗೃತರಾದಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು.
ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಪಿ.ಡಿ. ಶಿರೂರ ಅಧ್ಯಕ್ಷತೆ ವಹಿಸಿದ್ದರು. ಪ್ರೊ ಎನ್.ವಿ. ಕಂಬಾಳಿಮಠ, ಪ್ರೊ ಎಂ.ಸಿ. ಶಶಿಕಲಾ ಇದ್ದರು. ಮಂಜುಳಾ ಹೆರೂರ ಪ್ರಾರ್ಥಿಸಿದರು. ಪ್ರಾಚಾರ್ಯ ಡಾ ಬಿ.ಸಿ. ಬನ್ನೂರ ಸ್ವಾಗತಿಸಿದರು. ಪ್ರೊ ರೇಷ್ಮಾ ಇನಾಮದಾರ ನಿರೂಪಿಸಿದರು. ಡಾ ವಿ.ಡಿ. ಯಳಮಲಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

